ರಾಜ್ಯ ಸರ್ಕಾರದಿಂದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಆದೇಶಿಸಿದೆ.
ಈ ಬಗ್ಗೆ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿಯನ್ನು ಹೊರಡಿಸಿದ್ದು, ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ 2022-23ನೇ ಸಾಲಿನಲ್ಲಿ ನೇಮಕಾತಿಗೆ ಕರೆದಿರುವ ಪೊಲೀಸ್ ಕಾನ್ಸ್ ಟೇಬಲ್ ( ಸಿಎಆರ್ ಮತ್ತು ಡಿಎಆರ್) 420+3064 ಸೇರಿ ಒಟ್ಟು 3484 ಹುದ್ದೆಗಳಿಗೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್ ) 1137+454 ಸೇರಿದಂತೆ 1591 ಹುದ್ದೆಗಳಿಗೆ ಮಾತ್ರ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿಎಆರ್ ಮತ್ತು ಡಿಎಆರ್ ) ಹುದ್ದೆಗಳಿಗೆ ಗರಿಷ್ಠ ವಯೋಮಿತಿಯ ಕುರಿತಂತೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡಿದ ಷರತ್ತಿಗೆ ಒಳಪಟ್ಟು ಈ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…