ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬಾಕಿ ಉಳಿದಿರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್ ವಿತರಣೆ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಆಗಮಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಶೂ ಹಾಗೂ ಸಾಕ್ಸ್ ವಿತರಿಸುತ್ತಿದೆ ಎಂದು ತಿಳಿಸಿದರು.
ಶೂ ಮತ್ತು ಸಾಕ್ಸ್ ವಿತರಣಾ ಪ್ರಕ್ರಿಯೆಯಲ್ಲಿ ಎದುರಾಗಿರುವ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ, ವಿತರಣೆ ಸುಗಮವಾಗಿ ನಡೆಯುವಂತೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ನೋಡಲ್ ಅಧಿಕಾರಿಯನ್ನು ತಕ್ಷಣ ನೇಮಿಸಲಾಗುವುದು ಎಂದು ಸಚಿವರು ಸದನಕ್ಕೆ ಭರವಸೆ ನೀಡಿದರು.
ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯಗಳ ಜೊತೆಗೆ ಅಗತ್ಯ ವಸ್ತುಗಳನ್ನು ಸಮಯಕ್ಕೆ ಸರಿಯಾಗಿ ತಲುಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಬಾಕಿ ಇರುವ ವಿತರಣೆಯನ್ನು ನಿಗದಿತ ಗಡುವಿನೊಳಗೆ ಪೂರ್ಣಗೊಳಿಸುವುದಾಗಿ ಸಚಿವರು ಸ್ಪಷ್ಟಪಡಿಸಿದ್ದಾರೆ.
ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
School Education Minister Madhu Bangarappa has clarified that pending distribution of shoes and socks to government school students in Karnataka will be completed by August 28. Responding to a question by Congress MLC Balkis Banu in the Legislative Council, the minister said the initiative aims to encourage more children to attend government schools and assured that a nodal officer would be appointed immediately to resolve issues and streamline the distribution process.

