ಅಡಿಕೆ ಹಳದಿ ಎಲೆ ರೋಗದ ಸಂಶೋಧಿಸಲು ಮತ್ತು ನಿಯಂತ್ರಿಸಲು ಕರ್ನಾಟಕ ಸರ್ಕಾರವು 197 ಕೋಟಿ ರೂ.
ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿದೆ.
ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿರುವುದು ಕೂಡಾ ಈಚೆಗೆ ಸಂಕಷ್ಟ ತಂದಿದೆ. ವೈರಲ್, ಶಿಲೀಂಧ್ರ ಮತ್ತು ಬ್ಯಾಕ್ಟೀರಿಯಾದ ಸೋಂಕುಗಳು ಕೃಷಿಗೆ ಸವಾಲಾಗಿದೆ. ಸಸ್ಯ ರೋಗಗಳು ಸ್ಥಳೀಯ ಮತ್ತು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರಬಹುದು ಎನ್ನುವುದು ಗಂಭೀರ ವಿಷಯವಾಗಿದೆ.
ತಮ್ಮ ಜೀವನೋಪಾಯಕ್ಕಾಗಿ ಕೃಷಿಯನ್ನು ಅವಲಂಬಿಸಿರುವ ಸಣ್ಣರೈತರ ಮೇಲೆ ಸಸ್ಯ ರೋಗಗಳು ಗಮನಾರ್ಹ ಪರಿಣಾಮ ಬೀರುತ್ತವೆ. ಕರ್ನಾಟಕದಲ್ಲಿ ಕಾಣಿಸಿಕೊಂಡಿರುವ ಹಳದಿ ಎಲೆ ರೋಗಕ್ಕೆ ರೈತರು ತೀವ್ರ ಆರ್ಥಿಕ ನಷ್ಟವನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಹಳದಿ ಎಲೆ ರೋಗವನ್ನು ಸಂಶೋಧಿಸಲು ಮತ್ತು ನಿಯಂತ್ರಿಸಲು , ಸಮಸ್ಯೆಯನ್ನು ಪರಿಹರಿಸುವತ್ತ ಒಂದು ಸಕಾರಾತ್ಮಕ ಹೆಜ್ಜೆಯಾಗಿ ಕೇಂದ್ರ ಸರ್ಕಾರವು ನೆರವು ನೀಡಲು ರಾಜ್ಯ ಸರ್ಕಾರ ಮನವಿ ಮಾಡಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel