MIRROR FOCUS

ಅಡಿಕೆ ಹಳದಿ ಎಲೆರೋಗ ಸಂಶೋಧನೆ ಮತ್ತು ನಿಯಂತ್ರಣ | 197 ಕೋಟಿ ರೂಪಾಯಿ ಮಂಜೂರಾತಿಗೆ ಕೇಂದ್ರಕ್ಕೆ ಮನವಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಹಳದಿ ಎಲೆ ರೋಗದ ಸಂಶೋಧಿಸಲು ಮತ್ತು ನಿಯಂತ್ರಿಸಲು ಕರ್ನಾಟಕ ಸರ್ಕಾರವು 197 ಕೋಟಿ ರೂ.
ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿದೆ.

Advertisement
ಅಡಿಕೆಯು ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ರಾಜ್ಯದ ಸುಮಾರು 50 ಲಕ್ಷ ಜನರಿಗೆ ಜೀವನೋಪಾಯವನ್ನು ಒದಗಿಸಿದೆ. ಇದೀಗ ಅಡಿಕೆ ಹಳದಿ ಎಲೆರೋಗವು ವ್ಯಾಪಿಸುತ್ತಿದ್ದು ಬೆಳೆಗೆ ಹಾನಿಯನ್ನುಂಟುಮಾಡಿದೆ. ರೈತರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ  ಸಸ್ಯ ರೋಗಗಳನ್ನು ತಡೆಗಟ್ಟಲು ಮತ್ತು ನಿಯಂತ್ರಿಸಲು ವೈಜ್ಞಾನಿಕ ಸಂಶೋಧನೆ ಮತ್ತು ಪರಿಣಾಮಕಾರಿ ಕ್ರಮಗಳ ತುರ್ತು ಅಗತ್ಯ ಅನಿವಾರ್ಯವಾಗಿದೆ.  ರಾಜ್ಯದಲ್ಲಿ ರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕೇಂದ್ರ ಕೃಷಿ ಸಚಿವಾಲಯ ರಚಿಸಿರುವ ತಜ್ಞರ ಸಮಿತಿ ಹಳದಿ ಎಲೆ ರೋಗ ನಿಯಂತ್ರಣಕ್ಕೆ ಆಳವಾದ ಸಂಶೋಧನೆ ಅಗತ್ಯ ಎಂದು ಸಲಹೆ ನೀಡಿದೆ.

ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿರುವುದು ಕೂಡಾ ಈಚೆಗೆ ಸಂಕಷ್ಟ ತಂದಿದೆ.  ವೈರಲ್, ಶಿಲೀಂಧ್ರ ಮತ್ತು ಬ್ಯಾಕ್ಟೀರಿಯಾದ ಸೋಂಕುಗಳು ಕೃಷಿಗೆ  ಸವಾಲಾಗಿದೆ. ಸಸ್ಯ ರೋಗಗಳು ಸ್ಥಳೀಯ ಮತ್ತು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರಬಹುದು ಎನ್ನುವುದು ಗಂಭೀರ ವಿಷಯವಾಗಿದೆ.

ತಮ್ಮ ಜೀವನೋಪಾಯಕ್ಕಾಗಿ ಕೃಷಿಯನ್ನು ಅವಲಂಬಿಸಿರುವ ಸಣ್ಣರೈತರ ಮೇಲೆ ಸಸ್ಯ ರೋಗಗಳು  ಗಮನಾರ್ಹ ಪರಿಣಾಮ ಬೀರುತ್ತವೆ. ಕರ್ನಾಟಕದಲ್ಲಿ ಕಾಣಿಸಿಕೊಂಡಿರುವ ಹಳದಿ ಎಲೆ ರೋಗಕ್ಕೆ ರೈತರು ತೀವ್ರ ಆರ್ಥಿಕ ನಷ್ಟವನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಹಳದಿ ಎಲೆ ರೋಗವನ್ನು ಸಂಶೋಧಿಸಲು ಮತ್ತು ನಿಯಂತ್ರಿಸಲು , ಸಮಸ್ಯೆಯನ್ನು ಪರಿಹರಿಸುವತ್ತ ಒಂದು ಸಕಾರಾತ್ಮಕ ಹೆಜ್ಜೆಯಾಗಿ ಕೇಂದ್ರ ಸರ್ಕಾರವು ನೆರವು ನೀಡಲು ರಾಜ್ಯ ಸರ್ಕಾರ ಮನವಿ ಮಾಡಿದೆ.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮನೆಯೊಳಗೆ ನುಗ್ಗಿದ ಚಿರತೆ | ಸತತ 5 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ |

ಆನೇಕಲ್ ತಾಲೂಕಿನ ಜಿಗಣಿಯ ಕುಂಟ್ಲರೆಡ್ಡಿ ಬಡಾವಣೆಯ ವೇಂಕಟೇಶ್ ಎಂಬುವರ ಮನೆಗೆ ನಿನ್ನೆ ನುಗ್ಗಿದ್ದ…

5 hours ago

ರಸ್ತೆ ಸರಕು ಸಾಗಾಣೆಯಲ್ಲೂ ತೀವ್ರ ಏರಿಕೆ  |  ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ

ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ದೇಶಾದ್ಯಂತ 1 ಸಾವಿರದ 600 ಚಾಲಕ ತರಬೇತಿ ಕೇಂದ್ರಗಳನ್ನು…

7 hours ago

ಹವಾಮಾನ ವರದಿ | 04-04-2025 | ಇಂದು ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಎ.7 ರಿಂದ ಮಳೆ ಕಡಿಮೆಯಾಗುವ ಲಕ್ಷಣ |

ಇಂದು ಕೆಲವು ಕಡೆ ಗುಡುಗು ಸಹಿತ ಮಳೆಯ ಲಕ್ಷಣವಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ…

9 hours ago

ಅಡಿಕೆಯ ನಾಡಿನಲ್ಲಿ ಉಪಬೆಳೆಯಾಗಿ ತರಕಾರಿ ಕೃಷಿ ಮಾಡಿದ ಯುವಕ

ಕೃಷಿಕ ಯಶಸ್ವಿಯಾಗಬೇಕಾದರೆ , ಕೃಷಿ ಬೆಳೆಯಬೇಕಾದರೆ,ಉಳಿಯಬೇಕಾದರೆ ತಿಂಗಳಿಗೆ ಒಂದಷ್ಟು ಆದಾಯ ಸಿಗಲೇಬೇಕು. ಮುಖ್ಯ…

14 hours ago

ಅಭಯಾರಣ್ಯದಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧಕ್ಕೆ ಮನವಿ

ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಾರದೆಂದು ಸಂಸತ್ ಸದಸ್ಯ ತೇಜಸ್ವಿ…

14 hours ago

ಪಂಚಗ್ರಹಿ ಯೋಗ ಎಂದರೇನು..? | ಈ ಯೋಗವು ಮಹತ್ವದ್ದಾಗಿದೆ ಏಕೆ.. ?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago