ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ “ಕರ್ನಾಟಕ ಅಂತರ್ಜಲ ವಿನಿಮಯ ಹಾಗೂ ನಿಯಂತ್ರಣ ತಿದ್ದುಪಡಿ ವಿಧೇಯಕವು ವಿಧಾನಪರಿಷತ್ ನಲ್ಲಿಂದು ಅಂಗೀಕಾರಗೊಂಡಿತು.
ಸಭಾನಾಯಕರೂ ಆಗಿರುವ ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ಅವರು ಕರ್ನಾಟಕ ಅಂತರ್ಜಲ ವಿನಿಯಮನ ಹಾಗೂ ನಿಯಂತ್ರಣ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ವಿಧೇಯಕದ ಮೇಲೆ ಮಾತನಾಡಿದ ಬೋಸರಾಜ್ ೧೫ ರಾಜ್ಯಗಳು ಈಗಾಗಲೇ ಈ ಕಾಯ್ದೆ ಅನುಷ್ಠಾನಗೊಳಿಸಿವೆ. ಅಂತರ್ಜಲ ಅಭಿವೃದ್ಧಿಗೆ ಈ ವಿಧೇಯಕ ಸಹಕಾರಯಾಗಲಿದೆ. ಬೋರ್ ವೆಲ್ ಕೊರೆಯಲು ಅನುಮತಿ ಪಡೆಯುವುದು ಈ ವಿಧೇಯಕದ ಪ್ರಮುಖ ಅಂಶವಾಗಿದೆ ಎಂದರು. ವಿಧೇಯಕದ ಬಗ್ಗೆ ಸದಸ್ಯರಾದ ಐವಾನ್ ಡಿಸೋಜ, ರವಿಕುಮಾರ್, ನವೀನ್,ನಸೀರ್ ಅಹಮದ್ ಸೇರಿದಂತೆ 15 ಮಂದಿ ಅಂತರ್ಜಲ ಉಳಿಸುವುದು ಶುದ್ಧ ಕುಡಿಯುವ ನೀರಿನ ಬಳಕೆ ಕುರಿತು ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಸದಸ್ಯ ರವಿಕುಮಾರ್ ಅವರು ರಾಜ್ಯದ ಜನತೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದು ಸವಾಲಾಗಿ ಪರಿಣಮಿಸಿದೆ. ಸಮುದ್ರಕ್ಕೆ ವ್ಯರ್ಥವಾಗಿ ನೀರು ಸೇರುವುದನ್ನು ನಿಲ್ಲಿಸಿ, ನೀರು ಪೋಲಾಗುವುದನ್ನು ತಡೆಗಟ್ಟಿ ಅಂತರ್ಜಲ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲು ಆಗ್ರಹಿಸಿದರು. ಸದಸ್ಯರ ಸಲಹೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಾಗುವುದು. ‘ನೀರೇ ಭವಿಷ್ಯ’ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಸಚಿವ ಭೋಸರಾಜ್ ಹೇಳಿ ವಿಧೇಯಕದ ಅಂಗೀಕಾರಕ್ಕೆ ಮನವಿ ಮಾಡಿದರು. ಬಳಿಕ ವಿಧೇಯಕಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ” WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ…

