Advertisement
MIRROR FOCUS

ಅಂತರ್ಜಲ ವಿನಿಮಯ, ನಿಯಂತ್ರಣ ತಿದ್ದುಪಡಿ ವಿಧೇಯಕ | ವಿಧಾನಪರಿಷತ್ ನಲ್ಲಿ ಅಂಗೀಕಾರ | ಬೋರ್ ವೆಲ್ ಕೊರೆಯಲು ಇನ್ನು ಅನುಮತಿ ಬೇಕು |

Share

ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ “ಕರ್ನಾಟಕ ಅಂತರ್ಜಲ ವಿನಿಮಯ ಹಾಗೂ ನಿಯಂತ್ರಣ ತಿದ್ದುಪಡಿ ವಿಧೇಯಕವು ವಿಧಾನಪರಿಷತ್ ನಲ್ಲಿಂದು ಅಂಗೀಕಾರಗೊಂಡಿತು.

ಸಭಾನಾಯಕರೂ ಆಗಿರುವ ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ಅವರು ಕರ್ನಾಟಕ ಅಂತರ್ಜಲ ವಿನಿಯಮನ ಹಾಗೂ ನಿಯಂತ್ರಣ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ವಿಧೇಯಕದ ಮೇಲೆ ಮಾತನಾಡಿದ ಬೋಸರಾಜ್ ೧೫ ರಾಜ್ಯಗಳು ಈಗಾಗಲೇ ಈ ಕಾಯ್ದೆ ಅನುಷ್ಠಾನಗೊಳಿಸಿವೆ. ಅಂತರ್ಜಲ ಅಭಿವೃದ್ಧಿಗೆ ಈ ವಿಧೇಯಕ ಸಹಕಾರಯಾಗಲಿದೆ.  ಬೋರ್ ವೆಲ್ ಕೊರೆಯಲು ಅನುಮತಿ  ಪಡೆಯುವುದು  ಈ ವಿಧೇಯಕದ ಪ್ರಮುಖ ಅಂಶವಾಗಿದೆ ಎಂದರು. ವಿಧೇಯಕದ ಬಗ್ಗೆ ಸದಸ್ಯರಾದ ಐವಾನ್ ಡಿಸೋಜ, ರವಿಕುಮಾರ್, ನವೀನ್,ನಸೀರ್ ಅಹಮದ್ ಸೇರಿದಂತೆ 15 ಮಂದಿ ಅಂತರ್ಜಲ ಉಳಿಸುವುದು ಶುದ್ಧ ಕುಡಿಯುವ ನೀರಿನ ಬಳಕೆ ಕುರಿತು ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಸದಸ್ಯ ರವಿಕುಮಾರ್ ಅವರು ರಾಜ್ಯದ ಜನತೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದು ಸವಾಲಾಗಿ ಪರಿಣಮಿಸಿದೆ. ಸಮುದ್ರಕ್ಕೆ ವ್ಯರ್ಥವಾಗಿ ನೀರು ಸೇರುವುದನ್ನು ನಿಲ್ಲಿಸಿ, ನೀರು ಪೋಲಾಗುವುದನ್ನು ತಡೆಗಟ್ಟಿ ಅಂತರ್ಜಲ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲು ಆಗ್ರಹಿಸಿದರು. ಸದಸ್ಯರ ಸಲಹೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಾಗುವುದು. ‘ನೀರೇ ಭವಿಷ್ಯ’ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಸಚಿವ ಭೋಸರಾಜ್ ಹೇಳಿ ವಿಧೇಯಕದ ಅಂಗೀಕಾರಕ್ಕೆ ಮನವಿ ಮಾಡಿದರು. ಬಳಿಕ ವಿಧೇಯಕಯವನ್ನು ಧ್ವನಿ ಮತದ ಮೂಲಕ‌ ಅಂಗೀಕರಿಸಲಾಯಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ” WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

16 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago