Advertisement
MIRROR FOCUS

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

Share

ತೀವ್ರ ವಿರೋಧದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜಾರಿಗೊಳಿಸಿರುವ ಗುಟ್ಕಾ ನಿಷೇಧವನ್ನು ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಿಕೆ ಬೆಳೆಗಾರರ ಮೇಲೆ ನಿಷೇಧದ ಪರಿಣಾಮ ಉಂಟಾಗಲಿದೆ ಎಂದು ಶಾಸಕರು ಪಕ್ಷಾತೀತವಾಗಿ ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಆದರೆ ಅಧಿಕೃತವಾದ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಗುಟ್ಕಾ ನಿಷೇಧಿಸುವ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ವಿಚಾರ ನಡೆದ ಸಚಿವ ಸಂಪುಟ ಸಭೆಯಲ್ಲೂ ಚರ್ಚೆಗೆ ಬಂದಿದ್ದು, ಆರೋಗ್ಯ ಇಲಾಖೆ ಕಾರ್ಯದರ್ಶಿಯ ಕಾರ್ಯವೈಖರಿ ಕುರಿತು ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೆ, ನಿಷೇಧ ಹಿಂತೆಗೆತದ ಅಧಿಕೃತ ಆದೇಶ ಇನ್ನೂ ಸಾರ್ವಜನಿಕವಾಗಿ ಲಭ್ಯವಾಗಿಲ್ಲ. ಏಕೆಂದರೆ ಗುಟ್ಕಾ, ಪಾನ್‌ ಮಸಾಲಾ ನಿಷೇಧದ ಆದೇಶ ಈಗಾಗಲೇ ಹೊರಬಿದ್ದಿತ್ತು. ಈ ಆದೇಶವೂ ಅದೇ ಮಾದರಿ ಲಭ್ಯವಾಗಿಲ್ಲ.

ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವೇನು? :  ಗುಟ್ಕಾ ಮತ್ತು ಪಾನ್‌ ಮಸಾಲಾ ಉತ್ಪನ್ನಗಳ ಮೇಲಿನ ನಿರ್ಬಂಧದ ಚರ್ಚೆ ಕೇವಲ ತಂಬಾಕು ಉತ್ಪನ್ನಗಳ ವಿಚಾರವಾಗಿ ಉಳಿದಿಲ್ಲ. ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಪ್ರದೇಶಗಳ ಗ್ರಾಮೀಣ ಆರ್ಥಿಕತೆಯಲ್ಲಿ ಅಡಿಕೆ ಪ್ರಮುಖ ವಾಣಿಜ್ಯ ಬೆಳೆಯಾಗಿರುವುದರಿಂದ, ಅಡಿಕೆಯ ಬಳಕೆ ಮತ್ತು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಯಾವುದೇ ನೀತಿ ನಿರ್ಧಾರವೂ ಬೆಳೆಗಾರರ ಆತಂಕಕ್ಕೆ ಕಾರಣವಾಗುತ್ತಿದೆ.

ಅಡಿಕೆ ಉತ್ಪನ್ನಗಳ ಬಳಕೆಯ ಒಂದು ಭಾಗ ಗುಟ್ಕಾ, ಪಾನ್‌ ಮಸಾಲಾ ಮತ್ತು ಇತರ ಜಗಿಯುವ ಉತ್ಪನ್ನಗಳ ಉದ್ಯಮಕ್ಕೆ ಸಂಬಂಧಿಸಿದೆ. ಹೀಗಾಗಿ ಇಂತಹ ಉತ್ಪನ್ನಗಳ ಮೇಲೆ ರಾಜ್ಯ ಮಟ್ಟದಲ್ಲಿ ಏಕಾಏಕಿ ನಿರ್ಬಂಧ ಹೇರಿದರೆ, ಅದರ ಪರಿಣಾಮ ಅಡಿಕೆ ಬೇಡಿಕೆ, ಮಾರುಕಟ್ಟೆ ಮತ್ತು ಬೆಲೆಯ ಮೇಲೂ ಬೀಳಬಹುದು ಎಂಬ ಆತಂಕ ಬೆಳೆಗಾರರಲ್ಲಿ ವ್ಯಕ್ತವಾಗಿದೆ.

ಆರೋಗ್ಯ ಕಾಳಜಿ ಬೇರೆ, ಅಡಿಕೆ ಬೆಳೆಗಾರರ ಬದುಕು ಬೇರೆ :  ತಂಬಾಕು ಹಾಗೂ ಆರೋಗ್ಯಕ್ಕೆ ಹಾನಿಕಾರಕ ಉತ್ಪನ್ನಗಳ ನಿಯಂತ್ರಣದ ಅಗತ್ಯವನ್ನು ನಿರಾಕರಿಸಲಾಗದು. ಆದರೆ, ತಂಬಾಕು ಹೊಂದಿರುವ ಗುಟ್ಕಾ ಅಥವಾ ಪಾನ್‌ ಮಸಾಲಾ ಉತ್ಪನ್ನಗಳ ನಿಯಂತ್ರಣದ ಹೆಸರಿನಲ್ಲಿ ಅಡಿಕೆಯನ್ನು ಒಳಗೊಂಡಿರುವ ಎಲ್ಲ ಉತ್ಪನ್ನಗಳಿಗೂ ಒಂದೇ ರೀತಿಯ ನೀತಿ ಅನ್ವಯಿಸುವುದು ಸರಿಯೇ ಎಂಬ ಪ್ರಶ್ನೆ ಈಗ ಮುನ್ನೆಲೆಗೆ ಬಂದಿದೆ.

2026 ರ ಜೂನ್‌ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಾನ್‌ ಮಸಾಲಾ, ಗುಟ್ಕಾ, ಅಡಿಕೆ ಮತ್ತು ಇತರ ಉತ್ಪನ್ನಗಳಲ್ಲಿ ಮಾದಕ ವಸ್ತುಗಳನ್ನು ಬೆರೆಸಲಾಗುತ್ತಿದೆ ಎಂಬ ಮಾಹಿತಿ ಬಂದಿದ್ದು, ಅದು ಸಾಬೀತಾದರೆ ಇಂತಹ ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವುದಾಗಿ ಎಚ್ಚರಿಸಿದ್ದರು.

ಅಂದರೆ, ಸರ್ಕಾರದ ಮೂಲ ಕಾಳಜಿ ಮಾದಕ ವಸ್ತುಗಳ ಬಳಕೆ ಮತ್ತು ಯುವಜನರಲ್ಲಿ ಹೆಚ್ಚುತ್ತಿರುವ ವ್ಯಸನ ತಡೆಯುವುದಾಗಿದ್ದರೆ, ಅಕ್ರಮವಾಗಿ ಮಾದಕ ವಸ್ತುಗಳನ್ನು ಬೆರೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಮತ್ತು ಅಡಿಕೆ ಬೆಳೆಗಾರರ ಮಾರುಕಟ್ಟೆಗೆ ಹೊಡೆತ ನೀಡದ ರೀತಿಯಲ್ಲಿ ನಿಯಂತ್ರಣ ರೂಪಿಸುವುದು ಅಗತ್ಯವಾಗಿದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

15 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago