ದೇಶದಲ್ಲಿ ಹೆಚ್ಚು ಏರ್ಪೋರ್ಟ್ ಹೊಂದಿರುವ ರಾಜ್ಯ ಕರ್ನಾಟಕ | ಹಾರುವ ಕಾರುಗಳ ಪರಿಕಲ್ಪನೆ ಬೆಂಬಲಿಸಲು ಸರ್ಕಾರ ಬದ್ಧ – ಸಚಿವ ಸಿಂಧಿಯಾ

March 29, 2023
1:20 PM

ಕರ್ನಾಟಕ ಅತಿ ಹೆಚ್ಚು ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ. 

Advertisement
Advertisement
Advertisement

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಇತ್ತೀಚೆಗೆ, ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಆ ಮೂಲಕ ಕರ್ನಾಟಕ ಇಡೀ ದೇಶದಲ್ಲಿ ಅತೀ ಹೆಚ್ಚು ಏರ್ಪೋರ್ಟ್‌ಗಳನ್ನು ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ದೇಶದಲ್ಲಿ ಕಳೆದ 9 ವರ್ಷಗಳ ಅವಧಿಯಲ್ಲಿ ಗರಿಷ್ಠ ಸಂಖ್ಯೆಯ 74 ಏರ್ಪೋರ್ಟ್‌ಗಳನ್ನು ಕಾರ್ಯಾರಂಭಗೊಳಿಸಲಾಗಿದೆ ಎಂದು ಹೇಳಿದರು.

Advertisement

“ಕರ್ನಾಟಕದಲ್ಲೀಗ 10 ಏರ್ಪೋರ್ಟ್​ಗಳು ಕಾರ್ಯಾಚರಣೆ ನಡೆಸುತ್ತಿವೆ. 2014ರ ಮೊದಲು ಬೆಂಗಳೂರು ನಗರದ ಮೆಟ್ರೋ ಸಂಪರ್ಕ ಕೇವಲ 7 ಕಿ.ಮೀ ಮಾತ್ರ ಇತ್ತು. ಆದರೆ ಪ್ರಸ್ತುತ 70 ಕಿ.ಮೀ ಮೆಟ್ರೋ ರೈಲು ಸಂಪರ್ಕ ವ್ಯಾಪ್ತಿಯನ್ನು ಹೊಂದಿದೆ. 2014ಕ್ಕೂ ಮೊದಲು ಭಾರತ ಹೊಂದಿದ್ದ ಏರ್ಪೋರ್ಟ್‌ಗಳ ಸಂಖ್ಯೆ 74. ಪ್ರಸ್ತುತ 148 ನಿಲ್ದಾಣಗಳು ಇವೆ. ಮುಂದಿನ 5 ವರ್ಷಗಳಲ್ಲಿ ಇಡೀ ದೇಶದಲ್ಲಿ 200 ಏರ್ಪೋರ್ಟ್‌ಗಳು ಕಾರ್ಯಾಚರಣೆ ನಡೆಸಲಿವೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಮೂಲಭೂತ ಸೌಕರ್ಯ ಕ್ಷೇತ್ರದಲ್ಲಿ ಸುಧಾರಣೆಗಳನ್ನು ಕೈಗೊಂಡಿದ್ದು, ಕ್ಷಿಪ್ರ ಗತಿಯ ಅಭಿವೃದ್ಧಿಯು ಭಾರತವನ್ನು ವಿಶ್ವದ ಪ್ರಬಲ ಆರ್ಥಿಕತೆಗಳ ಸಾಲಿನಲ್ಲಿ ನಿಲ್ಲಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಹಾರುವ ಕಾರುಗಳ ಪರಿಕಲ್ಪನೆ ವಾಸ್ತವ, ಬೆಂಬಲಿಸಲು ಸರ್ಕಾರ ಬದ್ಧ ಅಂತೆಯೇ ನರೇಂದ್ರ ಮೋದಿ ಸರ್ಕಾರದ ನೇತೃತ್ವದಲ್ಲಿ ಶೀಘ್ರವೇAdvanced Air Mobility or Advanced Short haul Aircraft ( ASHA) ಕನಸು ನನಸಾಗಲಿದೆ ಎಂಬುದು ಗಮನಾರ್ಹ. ಹಾರುವ ಕಾರುಗಳ ಪರಿಕಲ್ಪನೆ ವಾಸ್ತವವಾಗಿದ್ದು, ಅದನ್ನು ಬೆಂಬಲಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ‘ನಾವು ಚಲನಚಿತ್ರಗಳಲ್ಲಿ ನೋಡುತ್ತಿದ್ದ ಹಾರುವ ಕಾರುಗಳ ಪರಿಕಲ್ಪನೆಯು ವಾಸ್ತವವಾಗಿದೆ ಮತ್ತು ಈ ಸಾರಿಗೆ ವಿಧಾನವನ್ನು ಬೆಂಬಲಿಸಲು ಸರ್ಕಾರವು ಸಂಪೂರ್ಣವಾಗಿ ಬದ್ಧವಾಗಿದೆ.

Advertisement

ಸಮಾನ ಪಾಲುದಾರರು “ನಾಗರಿಕ ವಿಮಾನಯಾನ ಸಚಿವಾಲಯದ ಪರವಾಗಿ ಮತ್ತು ಭಾರತ ಸರ್ಕಾರದ ಪರವಾಗಿ ನಾನು ಈ ವೇದಿಕೆಯಲ್ಲಿ ನಿಮ್ಮೊಂದಿಗೆ ಸಮಾನ ಪಾಲುದಾರರಾಗಲು ಸಿದ್ಧರಿದ್ದೇವೆ ಮತ್ತು ಹೊಸ ವಿಚಾರಗಳಿಗೆ ಬೀಜ ಹಾಕಿ ಪೋಷಿಸುವ ಕಾರ್ಯ ಈ ಪ್ರಗತಿಯಲ್ಲಿ ಪಾಲುದಾರರಾಗಲು ನಾನು ಬದ್ಧನಾಗಿದ್ದೇನೆ. ವಿಶ್ವದಲ್ಲಿ ಸಾರಿಗೆ ಕ್ರಾಂತಿಯು ಭಾರತದಿಂದ ಪ್ರಾರಂಭವಾಗಿದೆ ಎಂದು ಅವರು ಹೇಳಿದರು. ಅಂತೆಯೇ Mckinsey ನಡೆಸಿದ ಮಾರುಕಟ್ಟೆ ಅಧ್ಯಯನವನ್ನು ಉಲ್ಲೇಖಿಸಿ ಸಿಂಧಿಯಾ, ಇಂದು ಸುಮಾರು 31% ರಿಂದ 49% ಭಾರತೀಯರು ಸಮಯವನ್ನು ಉಳಿಸಲು ಸಾಧ್ಯವಾಗುವಂತೆ ಕಡಿಮೆ ಸೇವೆಗಳ ವಿಷಯದಲ್ಲಿ ಸುಧಾರಿತ ಏರ್ ಮೊಬಿಲಿಟಿ ಮೂಲಕ ಪ್ರಯಾಣಿಸಲು ಬಯಸುತ್ತಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, “ಇಡೀ ಭಾರತದಲ್ಲಿ ಅತಿ ಹೆಚ್ಚು ಏರ್ಪೋರ್ಟ್‌ಗಳನ್ನು ಕರ್ನಾಟಕ ಹೊಂದಿದ್ದು, ಸಮಸ್ತ ಕರ್ನಾಟಕದ ಜನತೆಯ ಪರವಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ
January 19, 2025
10:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |
January 19, 2025
11:01 AM
by: ಸಾಯಿಶೇಖರ್ ಕರಿಕಳ
ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ
January 19, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror