ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!

May 1, 2026
11:10 AM
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(IMD) ತಿಳಿಸಿದೆ. ಚೆನ್ನೈಯ ಪ್ರಾದೇಶಿಕ ಹವಾಮಾನ ಕೇಂದ್ರದ ಮುನ್ಸೂಚನೆಯ ಪ್ರಕಾರ, ದಕ್ಷಿಣ ಒಳನಾಡು, ಪಶ್ಚಿಮ ಘಟ್ಟದ ಜಿಲ್ಲೆಗಳು ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ, ಯಾದಗಿರಿ, ಗದಗ, ರಾಯಚೂರು, ಬಾಗಲಕೋಟೆ, ಕೊಪ್ಪಳ ಮತ್ತು ಧಾರವಾಡ ಜಿಲ್ಲೆಗಳಿಗೆ ‘ಎಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಇದಲ್ಲದೆ ಬಳ್ಳಾರಿ, ಹಾವೇರಿ, ದಾವಣಗೆರೆ, ಕೊಡಗು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿಯೂ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ ಎಂದು ಇಲಾಖೆ ಸಲಹೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇದೇ ವೇಳೆ  ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಾಗೂ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಬೆಂಗಳೂರು ನಗರದಲ್ಲಿ ಕೆಲವು ಕಡೆ ನಿನ್ನೆ  ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಗುಡುಗು ಸಹಿತ ಇಂದು ಕೂಡಾ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳಾದ ಹಾವೇರಿ, ಗದಗ, ಧಾರವಾಡ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.  ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡಾ ಹಗುರದಿಂದ ಗುಡುಗು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Heavy rainfall is expected across several regions of Karnataka over the next few days, especially in South Interior, coastal, and Western Ghats districts. The IMD has issued a Yellow Alert for multiple districts including Bengaluru and surrounding areas, warning of thunderstorms and heavy showers. Citizens and farmers are advised to take precautionary measures.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ
June 11, 2026
10:05 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ
June 11, 2026
7:08 AM
by: ದ ರೂರಲ್ ಮಿರರ್.ಕಾಂ
ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!
June 11, 2026
6:47 AM
by: ದಿವ್ಯ ಮಹೇಶ್
ಅಡಿಕೆ ಕೃಷಿ ಲಾಭದಾಯಕವೇ..? – ಮೂರು ವರ್ಷದಲ್ಲಿ ಕೆಜಿಗೆ ₹34.53 ವೆಚ್ಚ ಏರಿಕೆ – ನ್ಯಾಯಸಮ್ಮತ ಬೆಲೆಗಾಗಿ ರೈತರ ಒತ್ತಾಯ
June 10, 2026
10:30 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror