Advertisement
ಸುದ್ದಿಗಳು

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

Share

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಅಡುಗೆ ಅನಿಲದ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೌದೆಗೆ ಬೇಡಿಕೆ ಹೆಚ್ಚುತ್ತಿರುವುದನ್ನು ಗಮನಿಸಿ, ಕಾಡು ಹಾಗೂ ಸರ್ಕಾರದ ಭೂಮಿಯಲ್ಲಿ ಅಕ್ರಮವಾಗಿ ಮರ ಕಡಿತಲೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಈ ಕುರಿತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥರಿಗೆ ಲಿಖಿತ ನಿರ್ದೇಶನ ನೀಡಿರುವ ಸಚಿವರು, ಸೌದೆಗಾಗಿ ಅಕ್ರಮ ಮರ ಕಡಿತಲೆ ತಡೆಯಲು ಗಸ್ತು ಮತ್ತು ನಿಗಾವನ್ನು ತೀವ್ರಗೊಳಿಸುವಂತೆ ಆದೇಶಿಸಿದ್ದಾರೆ.

ಅರಣ್ಯ ಇಲಾಖೆಯ ಎಲ್ಲಾ ವೃತ್ತ ಹಾಗೂ ವಲಯಗಳಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಸೂಚಿಸಿದ್ದಾರೆ. ಸೌದೆ ಬೇಡಿಕೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಕಾಡಿನಂಚು ಹಾಗೂ ಸರ್ಕಾರದ ಭೂಮಿಗಳಲ್ಲಿ ಕಾನೂನು ಉಲ್ಲಂಘನೆ ನಡೆಯದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Forest Minister Eshwar B. Khandre has directed the department to intensify vigilance and patrols to prevent illegal tree felling amid rising firewood demand linked to LPG supply concerns. Officials have been instructed to take precautionary measures across forest divisions and prioritise environmental protection.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

11 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

15 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

2 days ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

2 days ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago