ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ…! | ಕೃಷಿ ವಲಯದ ಅಭಿವೃದ್ದಿಯಲ್ಲಿ ಹಿನ್ನಡೆ | ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶ |

October 22, 2024
6:31 AM
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿರುವುದಿಲ್ಲ.

ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇಕಡ 10.2 ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ.  ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇಕಡ 8.2 ಆಗಿದೆ.

ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ರಾಜ್ಯ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ. ಕರ್ನಾಟಕದ ತಲಾ ಜಿಎಸ್‌ಡಿಪಿ ದೇಶದಲ್ಲೇ ಅತ್ಯಧಿಕವಾಗಿದೆ.

ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿರುವುದಿಲ್ಲ. ಭಾರತದ ಐಟಿ ವಲಯ 2022 ರ ಹಣಕಾಸು ಸಾಲಿನಲ್ಲಿ ಶೇಕಡ 15.5 ರಷ್ಟು ಪ್ರಗತಿ ಕಂಡಿದ್ದು, 2023 ರ ಅವಧಿಯಲ್ಲಿ ಶೇಕಡ 8 ಕ್ಕೆ ಕುಸಿತ ಅನುಭವಿಸಿದೆ. ಉತ್ತಮ ಆಡಳಿತ ಮತ್ತು ಬಹುವಲಯಗಳ ಅಭಿವೃದ್ಧಿಯಿಂದಾಗಿ ಕರ್ನಾಟಕ ರಾಜ್ಯದ ಆರ್ಥಿಕತೆ ಸ್ಥಿರವಾಗಿರುವುದು ಕಂಡು ಬಂದಿದೆ. 2024-25 ನೇ ಹಣಕಾಸು ಸಾಲಿಗೆ ಎನ್‌ಎಸ್ಸಿ ಕರ್ನಾಟಕ ರಾಜ್ಯಕ್ಕೆ ಶೇಕಡ 9.4 ಜಿಎಸ್‌ಡಿಪಿ ಪ್ರಗತಿಯನ್ನು ಅಂದಾಜಿಸಿದ್ದು, ಇದು ರಾಷ್ಟ್ರೀಯ ಸರಾಸರಿ ಶೇಕಡ 10.5 ಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. ಗ್ಯಾರಂಟಿ ಸೇರಿದಂತೆ ರಾಜ್ಯ ಸರ್ಕಾರದ ಹಲವು ಜನಪರ ಯೋಜನೆಗಳು ಅಭಿವೃದ್ಧಿಯ ಫಲ ಎಲ್ಲಾ ವರ್ಗಗಳಿಗೂ ತಲುಪುವುದನ್ನು ಖಾತ್ರಿಪಡಿಸಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror