ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇಕಡ 10.2 ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇಕಡ 8.2 ಆಗಿದೆ.
ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ರಾಜ್ಯ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ. ಕರ್ನಾಟಕದ ತಲಾ ಜಿಎಸ್‌ಡಿಪಿ ದೇಶದಲ್ಲೇ ಅತ್ಯಧಿಕವಾಗಿದೆ.
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿರುವುದಿಲ್ಲ. ಭಾರತದ ಐಟಿ ವಲಯ 2022 ರ ಹಣಕಾಸು ಸಾಲಿನಲ್ಲಿ ಶೇಕಡ 15.5 ರಷ್ಟು ಪ್ರಗತಿ ಕಂಡಿದ್ದು, 2023 ರ ಅವಧಿಯಲ್ಲಿ ಶೇಕಡ 8 ಕ್ಕೆ ಕುಸಿತ ಅನುಭವಿಸಿದೆ. ಉತ್ತಮ ಆಡಳಿತ ಮತ್ತು ಬಹುವಲಯಗಳ ಅಭಿವೃದ್ಧಿಯಿಂದಾಗಿ ಕರ್ನಾಟಕ ರಾಜ್ಯದ ಆರ್ಥಿಕತೆ ಸ್ಥಿರವಾಗಿರುವುದು ಕಂಡು ಬಂದಿದೆ. 2024-25 ನೇ ಹಣಕಾಸು ಸಾಲಿಗೆ ಎನ್‌ಎಸ್ಸಿ ಕರ್ನಾಟಕ ರಾಜ್ಯಕ್ಕೆ ಶೇಕಡ 9.4 ಜಿಎಸ್‌ಡಿಪಿ ಪ್ರಗತಿಯನ್ನು ಅಂದಾಜಿಸಿದ್ದು, ಇದು ರಾಷ್ಟ್ರೀಯ ಸರಾಸರಿ ಶೇಕಡ 10.5 ಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. ಗ್ಯಾರಂಟಿ ಸೇರಿದಂತೆ ರಾಜ್ಯ ಸರ್ಕಾರದ ಹಲವು ಜನಪರ ಯೋಜನೆಗಳು ಅಭಿವೃದ್ಧಿಯ ಫಲ ಎಲ್ಲಾ ವರ್ಗಗಳಿಗೂ ತಲುಪುವುದನ್ನು ಖಾತ್ರಿಪಡಿಸಿವೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…