ರಾಜ್ಯದ ಕೆಲ ಜಿಮ್ ಗಳಲ್ಲಿ ಪ್ರೋಟೀನ್ ಪೌಡರ್ ಮಾರಾಟ ಮಾಡಲಾಗುತ್ತಿದ್ದು, ಪ್ರೋಟೀನ್ ಪೌಡರ್ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ರಾಜ್ಯದ ಹಲವು ಜಿಮ್ನಲ್ಲಿ ಬಳಸುವ ಪ್ರೋಟೀನ್ ಪೌಡರ್ ಅನ್ನು ಬ್ಯಾನ್ ಮಾಡುವಂತೆ ಸದನದಲ್ಲಿ ಒತ್ತಾಯ ಮಾಡಲಾಗಿದೆ. ಈ ಬಗ್ಗೆ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಜಿಮ್ಗಳಲ್ಲಿ ಬಳಕೆ ಮಾಡುವ ಪ್ರೋಟೀನ್ ಪೌಡರ್‌ಗಳ ಬಗ್ಗೆ ಸದನದ ಗಮನ ಸೆಳೆದು ತಮ್ಮ ಸಂತೋಷ್ ಎಂಬ ಯುವಕನು ಪ್ರೋಟೀನ್ ಪೌಡರ್ ಸೇವನೆ ಮಾಡಿದ ಪರಿಣಾಮಗಳನ್ನು ತಿಳಿಸಿದರು.
ಇದೇ ವೇಳೆ ಪ್ರೋಟೀನ್ ಪೌಡರ್ ಮಾರಾಟದ ಬಗ್ಗೆ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಕೆ ಸುಧಾಕರ್ ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel