Advertisement
ಸುದ್ದಿಗಳು

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

Share

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಈ ಬಾರಿ ರೈತರು ತಮ್ಮ ಬೆಳೆ ಮಾಹಿತಿಯನ್ನು ತಾವೇ ಮೊಬೈಲ್‌ ತಂತ್ರಾಂಶದ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ಕೃಷಿ ಇಲಾಖೆಯ ಫ್ರೂಟ್ಸ್ (Fruits) ತಂತ್ರಾಂಶದಲ್ಲಿ ಎಫ್‌.ಐ‌.ಡಿ. (FID) ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್‌ ಪ್ಲೇ ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ-2026-27” ಮೊಬೈಲ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಬೆಳೆ ಸಮೀಕ್ಷೆ ನಡೆಸಬಹುದು.

ಬೆಳೆ ಸಮೀಕ್ಷೆ ಹೇಗೆ ಮಾಡಬೇಕು?

  • ಗೂಗಲ್‌ ಪ್ಲೇ ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ-2026-27” ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಬೇಕು.
  • ಇ-ಕೆವೈಸಿ (e-KYC) ಮೂಲಕ ಆಧಾರ್‌ ದೃಢೀಕರಣ ಮಾಡಬೇಕು.
  • ಆಧಾರ್‌ ಸಂಖ್ಯೆಯನ್ನು ನಮೂದಿಸಿ OTP ಪಡೆಯಬೇಕು.
  • OTP ದಾಖಲಿಸಿದ ಬಳಿಕ ರೈತರ FID ಸಂಖ್ಯೆಗೆ ಸಂಬಂಧಿಸಿದ ಜಮೀನುಗಳ ಮಾಹಿತಿ ಲಭ್ಯವಾಗುತ್ತದೆ.
  • ನಂತರ ಸರ್ವೆ ನಂಬರ್‌, ಹಿಸ್ಸಾ ನಂಬರ್‌, ಮಾಲೀಕರ ಹೆಸರು ಸೇರಿದಂತೆ ಅಗತ್ಯ ಮಾಹಿತಿಯನ್ನು ಆಯ್ಕೆ ಮಾಡಬೇಕು.
  • ಜಮೀನಿನ ಗಡಿ ವ್ಯಾಪ್ತಿಯೊಳಗೆ ನಿಂತು ಬೆಳೆ ವಿವರ ದಾಖಲಿಸಿ ಸ್ಥಳದಲ್ಲೇ ಫೋಟೋ ತೆಗೆದು ಅಪ್‌ಲೋಡ್‌ ಮಾಡಬೇಕು.

FID ಇಲ್ಲದ ರೈತರು ಏನು ಮಾಡಬೇಕು? : ಎಫ್‌.ಐ‌.ಡಿ. ಸಂಖ್ಯೆ ಇಲ್ಲದ ರೈತರು ತಮ್ಮ ಹತ್ತಿರದ ಕೃಷಿ ಇಲಾಖೆ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ FID ಸಂಖ್ಯೆ ಮಾಡಿಸಿಕೊಳ್ಳಬಹುದು ಎಂದು ಇಲಾಖೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಬೆಳೆ ಸಮೀಕ್ಷೆ ಏಕೆ ಮಹತ್ವದ್ದು? : ರೈತರು ಸಲ್ಲಿಸುವ ಬೆಳೆ ಮಾಹಿತಿಯನ್ನು ಈ ಕೆಳಗಿನ ಉದ್ದೇಶಗಳಿಗೆ ಬಳಸಲಾಗುತ್ತದೆ.

  • ಪ್ರಕೃತಿ ವಿಕೋಪ ಪರಿಹಾರ ವಿತರಣೆ
  • ಬೆಳೆ ವಿಮೆ ಯೋಜನೆ ಅನುಷ್ಠಾನ
  • ವಿವಿಧ ಬೆಳೆಗಳ ವಿಸ್ತೀರ್ಣ ವರದಿ ತಯಾರಿ
  • ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಫಲಾನುಭವಿ ಯೋಜನೆಗಳು
  • ರೈತರ ಪಹಣಿಯಲ್ಲಿ ಬೆಳೆ ವಿವರ ದಾಖಲಿಸುವ ಕಾರ್ಯ

ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಯಾವುದೇ ಲೋಪದೋಷಗಳಿಲ್ಲದೆ ತಮ್ಮ ಜಮೀನಿನ ಸರ್ವೆ ನಂಬರ್‌ವಾರು ಬೆಳೆ ವಿವರವನ್ನು ತಾವೇ ಖುದ್ದಾಗಿ ಮೊಬೈಲ್‌ ತಂತ್ರಾಂಶದಲ್ಲಿ ದಾಖಲಿಸಿ ಮುಂಗಾರು 2026-27ರ ಬೆಳೆ ಸಮೀಕ್ಷೆ ಯಶಸ್ವಿಗೊಳಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

The Karnataka Agriculture Department has launched the 2026-27 Kharif Crop Survey, allowing farmers to submit crop details themselves through the “Mungaru Raithara Bele Sameekshe-2026-27” mobile app. The data will be used for crop insurance, disaster relief, beneficiary schemes, crop statistics, and land records.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

15 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

15 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

1 day ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

1 day ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

1 day ago