ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

May 7, 2026
7:37 AM
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹೈಕಮಾಂಡ್ ನಿರ್ಧಾರಕ್ಕೆ ತಾವು ಬದ್ಧ ಎಂದು ಕೂಡ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಬಾಕಿ ಉಳಿದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಇನ್ನಷ್ಟು ವಿಳಂಬ ಮಾಡದೆ ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಶೀಘ್ರದಲ್ಲೇ ಚುನಾವಣಾ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ತಾವು ಬದ್ಧರಾಗಿರುವುದಾಗಿ ಸ್ಪಷ್ಟಪಡಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ನಿಗದಿಯಾದ ತಕ್ಷಣ ದೆಹಲಿಗೆ ತೆರಳಿ ರಾಜ್ಯದ ಪ್ರಮುಖ ರಾಜಕೀಯ ಹಾಗೂ ಆಡಳಿತಾತ್ಮಕ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಇತ್ತೀಚಿನ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಪಡೆದ ಜಯ ಜನಸಾಮಾನ್ಯರು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ನೀಡಿದ ಬೆಂಬಲವಾಗಿದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

Karnataka Chief Minister Siddaramaiah said the state government is ready to conduct pending local body elections soon without further delay. He also stated that he would abide by any decision taken by the party high command regarding leadership changes and plans to discuss key state matters with Rahul Gandhi in Delhi.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!
August 20, 2026
9:46 PM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಭವಿಷ್ಯ ಈ ತೀರ್ಪಿನಲ್ಲಿದೆಯೇ..? ಗುಟ್ಕಾ ಬೇರೆ, ಅಡಿಕೆ ಬೇರೆ ? ಸುಪ್ರೀಂ ಕೋರ್ಟ್ ಮುಂದೆ ಇರುವ ದೊಡ್ಡ ಪ್ರಶ್ನೆಗಳು..
August 20, 2026
3:57 PM
by: ದ ರೂರಲ್ ಮಿರರ್.ಕಾಂ
ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ
August 20, 2026
3:06 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ
August 20, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror