ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವದಿ ಲಾರಿ ಮುಷ್ಕರ | ಸಂಧಾನ ಮಾತುಕತೆಯೂ ವಿಫಲ |

April 16, 2025
7:46 AM

ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು, ಆರ್‌ಟಿಒ ಗಡಿ ಚೆಕ್‌ಪೋಸ್ಟ್ ತೆಗೆಯಬೇಕು, ಎಫ್‌ಸಿ ಶುಲ್ಕ ಕಡಿಮೆ ಮಾಡಬೇಕು, ಸರಕು ಸಾಗಾಣೆ ವಾಹನ ನಿರ್ಬಂಧ ಹಿಂಪಡೆಯಬೇಕು ಎಂಬ ನಾಲ್ಕು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ  ರಾಜ್ಯದ ವಿವಿಧೆಡೆಗಳಲ್ಲಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಆರಂಭಗೊಂಡಿದೆ. ಬೆಂಗಳೂರು ಗ್ರಾಮಾಂತರ, ಮೈಸೂರು  ಸೇರಿದಂತೆ ಪ್ರಮುಖ ನಗರಗಳಲ್ಲಿ ಲಾರಿ ಸಂಚಾರ ಭಾಗಶಃ ಸ್ಥಗಿತಗೊಂಡಿದೆ. ಕರ್ನಾಟಕ ರಾಜ್ಯ ಲಾರಿ ಮಾಲೀಕರ ಸಂಘಟನೆ ಕರೆ ನೀಡಿರುವ ಮುಷ್ಕರಕ್ಕೆ ದೇಶದ 60 ವಿವಿಧ ಸಂಘಟನೆಗಳು ತಮ್ಮ ಬೆಂಬಲ ಸೂಚಿಸಿವೆ. ಸುಮಾರು 6 ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ. ಈ ನಡುವೆ ಲಾರಿ ಮಾಲೀಕರ ಜೊತೆ ಸಿಎಂ ನಿವಾಸದಲ್ಲಿ ನಡೆದ  ಮಾತುಕತೆಯಲ್ಲಿ ಲಾರಿ ಮಾಲೀಕರು ಇಟ್ಟ ಎಲ್ಲಾ ಬೇಡಿಕೆ ಪೂರೈಕೆಗೆ ಸರ್ಕಾರ ಒಪ್ಪಿಲ್ಲ. ಹೀಗಾಗಿ ಲಾರಿ ಮಾಲೀಕರು ಮುಷ್ಕರ ವಾಪಸ್ ಪಡೆಯದಿರಲು ನಿರ್ಧರಿಸಿದ್ದಾರೆ. ಮತ್ತಷ್ಟು ಉಗ್ರ ಹೋರಾಟ ಮಾಡುವ ಸೂಚನೆಯನ್ನು ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror