ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು, ಆರ್‌ಟಿಒ ಗಡಿ ಚೆಕ್‌ಪೋಸ್ಟ್ ತೆಗೆಯಬೇಕು, ಎಫ್‌ಸಿ ಶುಲ್ಕ ಕಡಿಮೆ ಮಾಡಬೇಕು, ಸರಕು ಸಾಗಾಣೆ ವಾಹನ ನಿರ್ಬಂಧ ಹಿಂಪಡೆಯಬೇಕು ಎಂಬ ನಾಲ್ಕು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ವಿವಿಧೆಡೆಗಳಲ್ಲಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಆರಂಭಗೊಂಡಿದೆ. ಬೆಂಗಳೂರು ಗ್ರಾಮಾಂತರ, ಮೈಸೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಲಾರಿ ಸಂಚಾರ ಭಾಗಶಃ ಸ್ಥಗಿತಗೊಂಡಿದೆ. ಕರ್ನಾಟಕ ರಾಜ್ಯ ಲಾರಿ ಮಾಲೀಕರ ಸಂಘಟನೆ ಕರೆ ನೀಡಿರುವ ಮುಷ್ಕರಕ್ಕೆ ದೇಶದ 60 ವಿವಿಧ ಸಂಘಟನೆಗಳು ತಮ್ಮ ಬೆಂಬಲ ಸೂಚಿಸಿವೆ. ಸುಮಾರು 6 ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ. ಈ ನಡುವೆ ಲಾರಿ ಮಾಲೀಕರ ಜೊತೆ ಸಿಎಂ ನಿವಾಸದಲ್ಲಿ ನಡೆದ ಮಾತುಕತೆಯಲ್ಲಿ ಲಾರಿ ಮಾಲೀಕರು ಇಟ್ಟ ಎಲ್ಲಾ ಬೇಡಿಕೆ ಪೂರೈಕೆಗೆ ಸರ್ಕಾರ ಒಪ್ಪಿಲ್ಲ. ಹೀಗಾಗಿ ಲಾರಿ ಮಾಲೀಕರು ಮುಷ್ಕರ ವಾಪಸ್ ಪಡೆಯದಿರಲು ನಿರ್ಧರಿಸಿದ್ದಾರೆ. ಮತ್ತಷ್ಟು ಉಗ್ರ ಹೋರಾಟ ಮಾಡುವ ಸೂಚನೆಯನ್ನು ನೀಡಿದ್ದಾರೆ.
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…