Advertisement
ಸುದ್ದಿಗಳು

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

Share

ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ಹಾಗೂ ರಾತ್ರಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ಸುಬ್ರಹ್ಮಣ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ 50 ಮಿಮೀಗಿಂತಲೂ ಅಧಿಕ ಮಳೆಯಾಗಿರುವುದು ದಾಖಲಾಗಿದೆ.

ಇದಲ್ಲದೆ, ಇದುವರೆಗಿನ ದಾಖಲೆಗಳ ಪ್ರಕಾರ ಮಾರ್ಚ್ ತಿಂಗಳಲ್ಲಿ ಇಷ್ಟು ಪ್ರಮಾಣದಲ್ಲಿ ಮಳೆಯಾದ ಅಪರೂಪದ ವರ್ಷವೂ ಇದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಅಕಾಲಿಕ ಮಳೆಯು ಹವಾಮಾನದಲ್ಲಿತೇವಾಂಶ ಹೆಚ್ಚಿಸುವುದರೊಂದಿಗೆ, ಕೆಲವು ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಿದೆ. ಇನ್ನೂ ಕೆಲವು ಕೃಷಿಗಳಿಗೆ ಸಂಕಷ್ಟವಾಗಿದೆ.

ಕರಾವಳಿ ಭಾಗಗಳಲ್ಲಿ ಮುಂದಿನ ದಿನಗಳಲ್ಲಿಯೂ ಮಳೆಯ ಪ್ರಮಾಣ ಮುಂದುವರಿಯುವ ಸಾಧ್ಯತೆ ಇದೆ. ಇದೇ ವೇಳೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಸಿಡಿಲು ಸಹಿತ ಮಳೆಯ ಸಂಭವವಿದೆ. ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಇದಲ್ಲದೆ ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದ್ದು, ಗಾಳಿಯ ಪ್ರಭಾವ ಹೆಚ್ಚಾದರೆ ಇತರ ಭಾಗಗಳಲ್ಲಿಯೂ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Unusual heavy rainfall has been recorded in Subrahmanya and nearby regions of Dakshina Kannada district, with over 50 mm rainfall reported in March—making it one of the rare high rainfall events for the month. The IMD has issued alerts for multiple districts across Karnataka, warning of continued rainfall and thunderstorms for the next two days.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

11 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

18 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago