ಹೈನುಗಾರರ ಹಿತದೃಷ್ಟಿಯಿಂದ ಹಾಲಿನ ದರ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಒಂದೆರಡು ವರ್ಷಗಳಿಂದ ದರ ಏರಿಕೆಗೆ ಬೇಡಿಕೆ ಇದ್ದು, ರೈತರಿಗೆ ಆಗುತ್ತಿರುವ ನಷ್ಟವನ್ನು ತಡೆಯುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ಲಾಸ್ಟಿಕ್ ಕವರ್, ಡೀಸೆಲ್, ಪೆಟ್ರೋಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಾಲಿನ ಸಾಗಾಣಿಕೆ ವೆಚ್ಚವೂ ಹೆಚ್ಚಾಗಿದೆ. ಹೀಗಾಗಿ ಹಾಲಿನ ದರವನ್ನು 12ರಿಂದ 15 ರೂಪಾಯಿಗಳವರೆಗೆ ಹೆಚ್ಚಿಸಬೇಕೆಂಬ ಬೇಡಿಕೆ ಇತ್ತು. ಎಲ್ಲರೊಂದಿಗೆ ಚರ್ಚಿಸಿದ ಬಳಿಕ ದರ ಏರಿಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ನೆರೆ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ಬೆಲೆ ಕಡಿಮೆ ಇದೆ. ಈ ಕಾರಣದಿಂದ ಕರ್ನಾಟಕದಿಂದ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಿಗೂ ಹಾಲು ಸರಬರಾಜಾಗುತ್ತಿತ್ತು ಎಂದು ಹೇಳಿದರು.
ತಿರುಪತಿಯಲ್ಲಿ ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪವನ್ನೇ ಖರೀದಿಸಲಾಗುತ್ತಿದೆ. ಇದು ನಂದಿನಿ ಉತ್ಪನ್ನಗಳ ಮೇಲಿರುವ ನಂಬಿಕೆಯನ್ನು ತೋರಿಸುತ್ತದೆ. ಹೈನುಗಾರರಿಗೆ ನಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಾಲಿನ ದರ ಹೆಚ್ಚಳದ ನಿರ್ಧಾರ ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದರು.
ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿಯೂ ಹಾಲಿನ ದರ ಹೆಚ್ಚಳ ಮಾಡಬೇಕೆಂದು ಪಕ್ಷಾತೀತವಾಗಿ ಶಾಸಕರು ಬೇಡಿಕೆ ಇಟ್ಟಿದ್ದರು. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಇದೀಗ ಚುನಾವಣೆ ಮುಗಿದಿರುವುದರಿಂದ ದರ ಏರಿಕೆ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
Karnataka Chief Minister D.K. Shivakumar said the milk price hike was decided to protect dairy farmers from mounting losses. He cited rising costs of plastic packaging, fuel and transportation, along with demands from legislators across party lines. He also noted that Karnataka’s milk prices were lower than those in neighbouring states and said the decision was taken after consultations.
ದೀಪಾವಳಿ ಹಿನ್ನೆಲೆಯಲ್ಲಿ ಸಾಲಿಗ್ರಾಮದ ನರಹರಿ ಶೆಣೈ ಅವರು ತಯಾರಿಸುವ ಪರಿಸರ ಸ್ನೇಹಿ ಸಾಂಪ್ರದಾಯಿಕ…
ದೀಪಾವಳಿ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಮತ್ತು…
ಅಂಗಾಂಶ ಕೃಷಿ ಅಡಿಕೆ ಗಿಡಗಳ ಬೇರುಗಳ ಬೆಳವಣಿಗೆ ಮತ್ತು ಬದುಕುಳಿಯುವಿಕೆಯನ್ನು ಹೆಚ್ಚಿಸುವ ಮಾರ್ಪಡಿಸಿದ…
ನವೆಂಬರ್ 1ರಿಂದ ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು…
ಮಣ್ಣಿನ ಫಲವತ್ತತೆ ಮತ್ತು ಮಾನವ ಆರೋಗ್ಯ ಕಾಪಾಡಲು ರೈತರು ಸಾವಯವ ಕೃಷಿಗೆ ಆದ್ಯತೆ…
ಎತ್ತರದ ಅಡಿಕೆ ತೋಟಗಳಲ್ಲಿ ಡ್ರೋನ್ ಮೂಲಕ ಔಷಧ ಸಿಂಪಡಿಸಲು ಐಸಿಎಆರ್–ಸಿಪಿಸಿಆರ್‌ಐ ವಿಜ್ಞಾನಿಗಳು ವೈಜ್ಞಾನಿಕ…