Advertisement
ವೆದರ್ ಮಿರರ್

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

Share

ರಾಜ್ಯದ ವಿವಿಧ ಭಾಗಗಳಲ್ಲಿ ಇಂದೂ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಮೇ 28 ಹಾಗೂ 29ರಿಂದ ಮಳೆಯ ಚಟುವಟಿಕೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಕರಾವಳಿ ಭಾಗಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದೂ ಕೆಲವೆಡೆ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ನಿನ್ನೆ ಹೆಚ್ಚಿನ ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗದೇ, ಕೆಲವು ಪ್ರದೇಶಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಗಡಿಭಾಗಗಳಲ್ಲಿಯೂ ಚದುರಿದ ಮಳೆಯ ಸಾಧ್ಯತೆ ಇದೆ. ಪ್ರಸ್ತುತ ಹವಾಮಾನ ಪರಿಸ್ಥಿತಿಯಂತೆ ಮೇ 28ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗುವ ಲಕ್ಷಣಗಳು ಕಂಡು ಬರುತ್ತಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ನಿನ್ನೆ ಕೆಲವೇ ಭಾಗಗಳಲ್ಲಿ ಮಳೆಯ ದಾಖಲೆ ಕಂಡುಬಂದಿದ್ದು, ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಕುಸಿಯುವ ಸಾಧ್ಯತೆಗಳಿವೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಹಲವೆಡೆ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಬಹುದಾಗಿದ್ದು, ಗಾಳಿಯ ಒತ್ತಡ ಹೆಚ್ಚಾದಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಮೇ 28ರಿಂದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಪ್ರಸ್ತುತ ಅಂದಾಜಿನಂತೆ ಮೇ 29ರಿಂದ ಈ ಭಾಗಗಳಲ್ಲಿಯೂ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.

ಇದೇ ವೇಳೆ, ಬಂಗಾಳಕೊಲ್ಲಿಯಲ್ಲಿ ಜೂನ್ 3 ರಿಂದ ವಾಯುಭಾರ ಕುಸಿತದಂತಹ ತಿರುವು ಕಾಣಿಸಿಕೊಳ್ಳುವ ಸಾಧ್ಯತೆಗಳಿದ್ದು, ಇದರಿಂದ ಮುಂಗಾರು ಚಟುವಟಿಕೆ ಚುರುಕುಗೊಳ್ಳುವ ನಿರೀಕ್ಷೆ ಇದೆ. ಈಗಿನ ಪ್ರಕಾರ ಜೂನ್ 4ರಂದು ಕೇರಳಕ್ಕೆ ಹಾಗೂ ಜೂನ್ 5ರಂದು ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ವ್ಯಕ್ತವಾಗಿದೆ.

ಮುಂಗಾರು ಪ್ರವೇಶದ ನಿರೀಕ್ಷೆಯ ನಡುವೆ ರೈತ ಸಮುದಾಯದಲ್ಲಿ ಬಿತ್ತನೆ ಹಾಗೂ ತೋಟಗಾರಿಕಾ ಚಟುವಟಿಕೆಗಳ ಸಿದ್ಧತೆ ಆರಂಭವಾಗಿದ್ದು, ಮುಂದಿನ ಕೆಲವು ದಿನಗಳ ಹವಾಮಾನ ಬೆಳವಣಿಗೆಗಳತ್ತ ಕೃಷಿಕರು ಕಾತರದಿಂದ ಗಮನ ಹರಿಸಿದ್ದಾರೆ.

Scattered thunderstorms and evening rains are likely across many parts of Karnataka over the next two days. Rain activity may reduce from May 28-29, while the southwest monsoon is expected to reach Kerala by June 4 and Karnataka by June 5.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 hour ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

2 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

3 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

9 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

15 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago