Advertisement
ಸುದ್ದಿಗಳು

ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ

Share

ಕರ್ನಾಟಕದಲ್ಲಿ ಮುಂಗಾರು ನಿರೀಕ್ಷೆಯ ನಡುವೆಯೇ ಮಳೆಯ ಚಟುವಟಿಕೆ ಮತ್ತೆ ನಿಧಾನಗೊಂಡಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಸಾಮಾನ್ಯ ಮಳೆಯಷ್ಟೇ ಮುಂದುವರಿಯುವ ಲಕ್ಷಣಗಳು ಕಂಡುಬರುತ್ತಿವೆ. ಅರಬ್ಬಿ ಸಮುದ್ರ ಹಾಗೂ ಉತ್ತರ ಹಿಂದೂ ಮಹಾಸಾಗರದಲ್ಲಿ ಮುಂಗಾರು ಮಾರುತಗಳಿಗೆ ಅಗತ್ಯವಾದ ಪೂರಕ ವಾತಾವರಣ ಇನ್ನೂ ಸಂಪೂರ್ಣವಾಗಿ ರೂಪುಗೊಳ್ಳದಿರುವುದು ಮುಂಗಾರು ಪ್ರಗತಿಗೆ ಅಡ್ಡಿಯಾಗುತ್ತಿದೆ.

ಕರಾವಳಿ ಭಾಗದಲ್ಲಿ ಮಳೆ ಕ್ಷೀಣ :  ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಧ್ಯಾಹ್ನ ನಂತರ ಹಾಗೂ ಸಂಜೆ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ.  ಆದರೆ ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ ಕರಾವಳಿ ಭಾಗದಲ್ಲಿ ಮೇ 30ರವರೆಗೆ ಭಾರೀ ಮಳೆಯ ಲಕ್ಷಣಗಳು ಕಾಣುತ್ತಿಲ್ಲ.

ಮಲೆನಾಡಿನಲ್ಲೂ ಸಾಮಾನ್ಯ ಮಳೆ ಮಾತ್ರ :  ಕೊಡಗು ಜಿಲ್ಲೆಯಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ವೇಳೆಗೆ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮಲೆನಾಡು ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕ್ಷೀಣವಾಗಿದೆ.

ಉತ್ತರ ಒಳನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ : ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮುಂದಿನ ಕೆಲವು ದಿನಗಳ ಕಾಲ ಈ ಭಾಗಗಳಲ್ಲಿ ಸಾಮಾನ್ಯ ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ದಕ್ಷಿಣ ಒಳನಾಡಿನಲ್ಲಿ ಮಳೆಯ ಚಟುವಟಿಕೆ ಹೆಚ್ಚು : ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಸಂಜೆ ಹಾಗೂ ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ರಿಂದ 3 ದಿನಗಳ ಕಾಲ ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮುಂಗಾರು ವಿಳಂಬದ ಲಕ್ಷಣ : ಅರಬ್ಬಿ ಸಮುದ್ರ ಹಾಗೂ ಉತ್ತರ ಹಿಂದೂ ಮಹಾಸಾಗರದಲ್ಲಿ ಮುಂಗಾರು ಮಾರುತಗಳಿಗೆ ಸ್ಪಷ್ಟವಾದ ಪೂರಕ ವ್ಯವಸ್ಥೆ ಇನ್ನೂ ರೂಪುಗೊಂಡಿಲ್ಲ. ಇದರಿಂದ ಮುಂಗಾರು ನಿರೀಕ್ಷಿತ ಸಮಯದಲ್ಲಿ ರಾಜ್ಯ ಪ್ರವೇಶಿಸುವ ಸಾಧ್ಯತೆಗಳು ಕಡಿಮೆಯಾಗುತ್ತಿವೆ.
ಇದರ ನಡುವೆಯೇ ಇನ್ನೆರಡು ದಿನಗಳಲ್ಲಿ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಪರಿಣಾಮವಾಗಿ ಸೋಮಾಲಿಯ ಜೆಟ್‌ ವೇವ್ಸ್‌ ಪ್ರಭಲಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಮುಂದಿನ ಕೆಲವು ದಿನಗಳ ಹವಾಮಾನ ಬೆಳವಣಿಗೆಗಳು ಮುಂಗಾರು ಚಟುವಟಿಕೆಗೆ ನಿರ್ಣಾಯಕವಾಗುವ ಸಾಧ್ಯತೆಗಳಿವೆ.

Rain activity has weakened across Karnataka, with only scattered light to moderate showers expected over the next few days. Coastal and Malnad regions are unlikely to receive heavy rainfall until the end of May, while thunder showers may continue in parts of North and South Interior Karnataka. Weak monsoon-supporting conditions over the Arabian Sea and North Indian Ocean are delaying monsoon progress, raising concerns over a late onset in Karnataka.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

9 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

18 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago