ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

June 5, 2026
11:18 AM
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಜೂನ್ 12ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಕ್ರಮೇಣ ಚುರುಕುಗೊಳ್ಳುತ್ತಿದ್ದು, ಜೂನ್ 8 ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ವ್ಯಾಪಕ ಹಾಗೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಭಾಗದಲ್ಲಿ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಕಡಲ ತೀರದ ಸುತ್ತಮುತ್ತ ಪ್ರದೇಶಗಳಲ್ಲಿ ಬಿಟ್ಟುಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ನೀಡಲಾಗಿದೆ. ಉಳಿದ ಪ್ರದೇಶಗಳಲ್ಲಿ ದಿನದ ವೇಳೆ ಎರಡು ಅಥವಾ ಮೂರು ಬಾರಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಪ್ರಸ್ತುತ ಅಂದಾಜಿನಂತೆ ಜೂನ್ 8 ರಿಂದ 13ರವರೆಗೆ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆ ಮುಂದುವರಿಯುವ ಲಕ್ಷಣಗಳಿವೆ.

Advertisement

ಮಲೆನಾಡು ಪ್ರದೇಶಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ. ಈ ವಾತಾವರಣ ಜೂನ್ 7ರವರೆಗೆ ಮುಂದುವರಿಯಲಿದ್ದು, ಬಳಿಕ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬಳ್ಳಾರಿ, ಕೊಪ್ಪಳ, ರಾಯಚೂರು, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದರೆ, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ. ಜೂನ್ 7ರವರೆಗೆ ಮಳೆಯ ಚಟುವಟಿಕೆ ಮುಂದುವರಿದು, ಬಳಿಕ ಕೆಲ ದಿನಗಳ ವಿರಾಮದ ನಂತರ ಜೂನ್ 10 ರಿಂದ ಮತ್ತೆ ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ. ಜೂನ್ 11ರವರೆಗೆ ಇದೇ ಸ್ಥಿತಿ ಮುಂದುವರಿಯಲಿದ್ದು, ಜೂನ್ 12ರಿಂದ ಮಳೆಯ ತೀವ್ರತೆ ಹೆಚ್ಚಾಗುವ ಲಕ್ಷಣಗಳಿವೆ.

ರಾಜ್ಯಕ್ಕೆ ಈಗಾಗಲೇ ಮುಂಗಾರು ಪ್ರವೇಶಿಸಿದ್ದು, ಆಸ್ಟ್ರೇಲಿಯಾ ಭಾಗದಿಂದ ಹಿಂದೂ ಮಹಾಸಾಗರದ ಮೂಲಕ ಮುಂಗಾರು ಮಾರುತಗಳ ಹರಿವು ಉತ್ತಮವಾಗಿದೆ. ಪ್ರಸ್ತುತ ಸೋಮಾಲಿಯಾ ಜೆಟ್ ಸ್ಟ್ರೀಮ್ ಪ್ರಭಾವ ಕಡಿಮೆಯಾಗಿದ್ದರೂ, ಮುಂದಿನ ನಾಲ್ಕೈದು ದಿನಗಳಲ್ಲಿ ಆಸ್ಟ್ರೇಲಿಯಾ ಭಾಗದ ಮಾರುತಗಳು ಸ್ವಲ್ಪ ಮಂದಗತಿಯಾಗುವ ಸಾಧ್ಯತೆ ಇದೆ. ಇದೇ ವೇಳೆ ದಕ್ಷಿಣ ದ್ರವ ಪ್ರದೇಶದತ್ತ ಸೋಮಾಲಿಯಾ ಜೆಟ್ ಸ್ಟ್ರೀಮ್ ಬಲಗೊಳ್ಳುವ ಸೂಚನೆಗಳಿದ್ದು, ಇದು ಮುಂದಿನ ದಿನಗಳಲ್ಲಿ ಮಳೆಯ ಹಂಚಿಕೆಯಲ್ಲಿ ಬದಲಾವಣೆ ತರಬಹುದು ಎಂದು ಅಂದಾಜಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement

Monsoon activity is expected to strengthen across Karnataka in the coming days. Coastal districts are likely to receive widespread rainfall from June 8 to 13, while Malnad regions may see increased rainfall after June 7. South Interior Karnataka is expected to witness a rise in rainfall from June 12 onward. Improved monsoon winds from the Indian Ocean continue to support rainfall activity across the state.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror