Advertisement
ವೆದರ್ ಮಿರರ್

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

Share

ರಾಜ್ಯದಲ್ಲಿ ಮುಂಗಾರು ಪ್ರವೇಶಿಸಿದರೂ ಅದರ ಪ್ರಭಾವ ಇನ್ನೂ ದುರ್ಬಲವಾಗಿಯೇ ಮುಂದುವರಿಯುವ ಲಕ್ಷಣಗಳು ಕಂಡುಬಂದಿವೆ. 07.06.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಕರಾವಳಿ, ಮಲೆನಾಡು ಹಾಗೂ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ನಿರೀಕ್ಷೆಯಿದ್ದು, ವ್ಯಾಪಕ ಮಳೆಯ ಸಾಧ್ಯತೆ ಕಡಿಮೆಯಾಗಿದೆ.

ಕರಾವಳಿ ಭಾಗದಲ್ಲಿ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿ ತೀರ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ದಿನದ ವೇಳೆ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು-ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ನಿರೀಕ್ಷೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 8 ರಿಂದ ಮುಂಗಾರು ಸ್ವಲ್ಪ ಚೇತರಿಸಿಕೊಳ್ಳುವ ಸಾಧ್ಯತೆ ಇದ್ದರೂ, ಜೂನ್ 12 ಅಥವಾ 13 ರಿಂದ ಮತ್ತೆ ದುರ್ಬಲಗೊಳ್ಳುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ದಿನದ ವೇಳೆ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ. ಜೂನ್ 8ರಿಂದ ಮುಂಗಾರು ಚಟುವಟಿಕೆ ಸ್ವಲ್ಪ ಹೆಚ್ಚಾಗುವ ನಿರೀಕ್ಷೆಯಿದ್ದರೂ, ಜೂನ್ 13 ರ ನಂತರ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು ಭಾಗದಲ್ಲಿ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ರಾಯಚೂರು, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಈಗಿನ ಮಳೆಯ ಚಟುವಟಿಕೆ ಜೂನ್ 12 ರವರೆಗೆ ಮುಂದುವರಿಯುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಭಾಗದಲ್ಲಿ ಮಳೆಯ ವಾತಾವರಣ ಜೂನ್ 11ರವರೆಗೆ ಮುಂದುವರಿಯುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಒಟ್ಟಾರೆಯಾಗಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದರೂ, ಅದರ ಬಲ ಇನ್ನೂ ಹೆಚ್ಚಾಗಿಲ್ಲ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 8 ರಿಂದ ಕೆಲ ದಿನಗಳ ಕಾಲ ಮುಂಗಾರು ಚಟುವಟಿಕೆ ಹೆಚ್ಚಾಗುವ ನಿರೀಕ್ಷೆಯಿದ್ದು, ನಂತರ ಮತ್ತೆ ದುರ್ಬಲಗೊಳ್ಳುವ ಸಾಧ್ಯತೆ ಇದೆ.

The southwest monsoon has entered Karnataka but remains weak across most regions. Coastal districts may see a slight increase in rainfall activity from June 8, while Malnad and interior districts are expected to receive scattered showers. However, weather models indicate that the monsoon could weaken again around June 12–13.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

3 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

9 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

9 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

10 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

20 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

1 day ago