Advertisement
ವೆದರ್ ಮಿರರ್

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

Share

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ.

ಕರಾವಳಿ ಭಾಗದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ದಿನದ ವೇಳೆ ಒಂದೆರಡು ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಕರಾವಳಿ ತೀರ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದ್ದು, ಜೂ.8ರಿಂದ 14ರವರೆಗೆ ಮುಂಗಾರು ಚಟುವಟಿಕೆಗಳು ಚುರುಕುಗೊಂಡು ಉತ್ತಮ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯಾಗಲಿದೆ. ವಿಶೇಷವಾಗಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಜೂ. 8ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಸ್ವಲ್ಪ ಹೆಚ್ಚಾಗಲಿದ್ದು, ಜೂ. 15ರ ಬಳಿಕ ಮಳೆಯ ತೀವ್ರತೆ ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ, ಸಂಜೆ ಮತ್ತು ರಾತ್ರಿ ವೇಳೆ ಉತ್ತಮ ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ, ಬೀದರ್, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಜೂ. 11ರಿಂದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಂಡುಬಂದಿವೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜೂ. 10ರಿಂದ ಈ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ.

ಅರಬ್ಬಿ ಸಮುದ್ರದ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ಗಾಳಿಯ ತಿರುಗುವಿಕೆ ಉಂಟಾಗಿದ್ದು, ಇದು ಮುಂಗಾರು ಮಾರುತಗಳ ವಿರುದ್ಧ ದಿಕ್ಕಿನಲ್ಲಿ ಬೀಸುತ್ತಿದೆ. ಇದರ ಪರಿಣಾಮವಾಗಿ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದರೂ, ಉತ್ತಮ ಮಳೆಯ ನಿರೀಕ್ಷೆ ಮುಂದುವರಿದಿದೆ. ಈ ವ್ಯವಸ್ಥೆ ಶಿಥಿಲಗೊಂಡ ಬಳಿಕ ಮುಂಗಾರು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Monsoon activity is likely to intensify across Karnataka from June 8. Coastal and Malnad districts are expected to receive good rainfall until June 14, while several districts in North and South Interior Karnataka may witness thunderstorms and evening showers. Heavy rainfall chances along the coast remain low for now due to a mid-level wind circulation over the Arabian Sea.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

3 days ago