#WeatherMirror | 25-06-2023 | ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ |

June 25, 2023
11:50 AM

26.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ. ಬೆಂಗಳೂರು ಒಂದೆರಡು ಕಡೆ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮುಂಗಾರು ಮುಂದುವರಿಯುವ ಲಕ್ಷಣಗಳಿದ್ದರೆ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ದುರ್ಬಲತೆ ಮುಂದುವರಿಯುವ ಲಕ್ಷಣಗಳಿವೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳಿಗೆ ಆರೆಂಜ್ ಎಲರ್ಟ್​ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಕಡಲ ತೀರಗಳಲ್ಲಿ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಿದೆ. ಮತ್ತು ದಕ್ಷಿಣ ಒಳನಾಡಿನಲ್ಲಿ ಮಾತ್ರ ಮಳೆಯ ಅಬ್ಬರ ಹೆಚ್ಚಾಗಿದೆ. ಅಲ್ಲದೆ ನಿನ್ನೆ ಕಾರವಾರ ಮತ್ತು ಹೊನ್ನಾವರದಲ್ಲಿ ಭಾರೀ ಮಳೆ ಬಿದ್ದಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ
ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror