Advertisement
ಸುದ್ದಿಗಳು

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

Share

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ ಮುಂದುವರಿಯುವ ಲಕ್ಷಣಗಳಿವೆ. ಬಂಗಾಳಕೊಲ್ಲಿಯ ತಿರುವಿಕೆ ಪಶ್ಚಿಮ ಬಂಗಾಳ–ಒಡಿಶಾ ಕರಾವಳಿಯನ್ನು ಪ್ರವೇಶಿಸುತ್ತಿರುವ ಹಿನ್ನೆಲೆಯಲ್ಲಿ ಮುಂಗಾರು ಚಟುವಟಿಕೆ ಹೆಚ್ಚಾಗಿದೆ.

ಕರಾವಳಿ ಕರ್ನಾಟಕ: ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡದಲ್ಲಿ ಮಳೆಯ ಪ್ರಮಾಣ ತುಸು ಕಡಿಮೆಯಾಗುವ ಸಾಧ್ಯತೆಯಿದೆ. ಈ ವಾತಾವರಣ ಆಗಸ್ಟ್ 25ರವರೆಗೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು: ಕೊಡಗು, ಹಾಸನದ ಸಕಲೇಶಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹಲವೆಡೆ ಮೋಡ ಕವಿದ ವಾತಾವರಣದೊಂದಿಗೆ ಬಿಟ್ಟುಬಿಟ್ಟು ಸಾಮಾನ್ಯ ಮಳೆಯ ಸಾಧ್ಯತೆಯಿದೆ. ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆಯೂ ಇದೆ. ಆಗಸ್ಟ್ 25ರವರೆಗೆ ಮಳೆ ಮುಂದುವರಿಯಬಹುದು.

ಉತ್ತರ ಒಳನಾಡು: ಇಂದು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಮುಂದಿನ ಎರಡು ದಿನಗಳ ಕಾಲವೂ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು: ದಾವಣಗೆರೆ, ವಿಜಯನಗರ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಾಧ್ಯತೆಯಿದೆ. ಹಾಸನ, ಉತ್ತರ ತುಮಕೂರು ಹಾಗೂ ಚಿತ್ರದುರ್ಗ ಭಾಗಗಳಲ್ಲಿ ಬಿಸಿಲು–ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯಾಗಬಹುದು. ಆಗಸ್ಟ್ 25ರವರೆಗೆ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಆಗಸ್ಟ್ 25ರ ಬಳಿಕ ಏನಾಗಬಹುದು? : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತಿರುವಿಕೆ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿಯನ್ನು ದಾಟಿ ಭೂಭಾಗ ಪ್ರವೇಶಿಸುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಮುಂಗಾರು ಚುರುಕಾಗಿದೆ. ಆದರೆ ಆಗಸ್ಟ್ 25ರ ನಂತರ ಈ ವ್ಯವಸ್ಥೆ ಶಿಥಿಲಗೊಳ್ಳುವ ಸಾಧ್ಯತೆಯಿದ್ದು, ಅದರೊಂದಿಗೆ ರಾಜ್ಯದಲ್ಲಿ ಮುಂಗಾರು ಮತ್ತೆ ದುರ್ಬಲವಾಗುವ ಲಕ್ಷಣಗಳಿವೆ.

ರೈತರಿಗೆ ಸೂಚನೆ: ಸದ್ಯ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ತೋಟಗಾರಿಕಾ ಬೆಳೆಗಳಲ್ಲಿ ಸಿಂಪಡಣೆ, ಗೊಬ್ಬರ ನೀಡಿಕೆ ಹಾಗೂ ಕೊಯ್ಲು ಕಾರ್ಯಗಳನ್ನು ಸ್ಥಳೀಯ ಮಳೆ ಪರಿಸ್ಥಿತಿಯನ್ನು ಗಮನಿಸಿ ನಿರ್ವಹಿಸುವುದು ಸೂಕ್ತ.  ಮುಂದಿನ ಎರಡು ದಿನಗಳಲ್ಲಿ ಉತ್ತರ ಒಳನಾಡು ಹಾಗೂ ಆಗಸ್ಟ್ 25ರವರೆಗೆ ಕರಾವಳಿ–ಮಲೆನಾಡಿನಲ್ಲಿ ಮಳೆಯ ಸಾಧ್ಯತೆ ಇರುವುದರಿಂದ ತೋಟಗಾರಿಕಾ ಬೆಳೆಗಳಲ್ಲಿ ಸಿಂಪಡಣೆ, ಗೊಬ್ಬರ ನೀಡಿಕೆ ಮತ್ತು ಕೊಯ್ಲು ಕಾರ್ಯಗಳನ್ನು ಸ್ಥಳೀಯ ಮಳೆ ಪರಿಸ್ಥಿತಿಯನ್ನು ಗಮನಿಸಿ ಕೈಗೊಳ್ಳುವುದು ಸೂಕ್ತ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Karnataka is likely to experience an active monsoon phase until August 25, with intermittent good rainfall expected across the coastal districts, while parts of the Malnad region may also receive normal to good showers. Most parts of North Interior Karnataka may receive rain for the next two days, while scattered rainfall is expected over parts of South Interior Karnataka. The current increase in monsoon activity is linked to a system moving inland after crossing the West Bengal–Odisha coast, but the monsoon may weaken again after August 25 as the system loses strength.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

3 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

8 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

8 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

19 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

23 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago