Advertisement
ಸುದ್ದಿಗಳು

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

Share

ರಾಜ್ಯದಲ್ಲಿ ಮುಂಗಾರು ಚಟುವಟಿಕೆ ನಿಧಾನವಾಗಿ ಚುರುಕುಗೊಳ್ಳುತ್ತಿದ್ದು, ಕರಾವಳಿ ಭಾಗಗಳಲ್ಲಿ ಈಗಾಗಲೇ ಉತ್ತಮ ಮಳೆಯ ಆರಂಭವಾಗಿದೆ. ಜೂನ್ 4ರಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಭಾಗಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದೇ ವೇಳೆ ಜೂನ್ 8ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಕರಾವಳಿ ಭಾಗ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಪ್ರದೇಶಗಳಲ್ಲಿ ಈಗಾಗಲೇ ಮುಂಗಾರು ಮಾದರಿಯ ಮಳೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಕಡಲ ತೀರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ.

ಜೂನ್ 4ರಿಂದ ಕರಾವಳಿಯ ದಕ್ಷಿಣ ಭಾಗಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಒಳನಾಡು ಭಾಗಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಈಗಿನ ಅಂದಾಜಿನಂತೆ ಜೂನ್ 8ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಲೆನಾಡು ಭಾಗ : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆನಾಡು ಪ್ರದೇಶಗಳಲ್ಲಿ ಮಳೆ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು.

ಜೂನ್ 8ರಿಂದ ಮಲೆನಾಡಿನಲ್ಲಿ ಉತ್ತಮ ಮುಂಗಾರು ಮಳೆಯ ಆರಂಭವಾಗುವ ಸಾಧ್ಯತೆಗಳಿವೆ.

ಉತ್ತರ ಒಳನಾಡು : ಹಾವೇರಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ.

ಜೂನ್ 6ರವರೆಗೆ ಗುಡುಗು ಮಳೆ ಮುಂದುವರಿಯಲಿದ್ದು, ನಂತರ ಸ್ವಲ್ಪ ಕಡಿಮೆಯಾಗಬಹುದು. ಆದರೆ ಜೂನ್ 11ರಿಂದ ಮುಂಗಾರು ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಈ ಮಳೆಯು ಜೂನ್ 7ರವರೆಗೆ ಮುಂದುವರಿಯುವ ಸಾಧ್ಯತೆ ಇದ್ದು, ಬಳಿಕ ಸ್ವಲ್ಪ ಕಡಿಮೆಯಾಗಬಹುದು. ಆದರೆ ಜೂನ್ 10ರಿಂದ ಮುಂಗಾರು ಮಳೆಯ ಚಟುವಟಿಕೆ ಆರಂಭವಾಗುವ ಲಕ್ಷಣಗಳಿವೆ.

ಮುಂಗಾರಿಗೆ ಪೂರಕ ವಾತಾವರಣ : ಅರಬ್ಬಿ ಸಮುದ್ರದಲ್ಲಿ ಮುಂಗಾರಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗುತ್ತಿದ್ದು, ಸೋಮಾಲಿಯಾ ಜಟ್ ಸ್ಟ್ರೀಮ್ ಚಟುವಟಿಕೆಗಳೂ ಚುರುಕಾಗಿವೆ. ಇದರಿಂದ ಜೂನ್ 12ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ.

ಈಗಿನ ಅಂದಾಜಿನಂತೆ ಜೂನ್ 13 ಅಥವಾ 14ರಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದ್ದರೂ, ಮುಂದಿನ ದಿನಗಳಲ್ಲಿ ಹವಾಮಾನ ಬದಲಾವಣೆಗಳನ್ನು ಗಮನಿಸಬೇಕಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Monsoon activity is gradually intensifying across Karnataka, especially in the coastal districts of Dakshina Kannada, Udupi and Kasaragod where steady rainfall has already begun. Weather forecasts indicate widespread good rainfall across the state from June 8 onwards, supported by favourable Arabian Sea conditions and strengthening monsoon winds.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

4 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

9 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

10 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

17 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago