Advertisement
ವೆದರ್ ಮಿರರ್

ಹವಾಮಾನ ವರದಿ | 01-06-2026 | ಜೂನ್ 4 ರಿಂದ ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ಆರಂಭ ಸಾಧ್ಯತೆ – ಜೂನ್ 8ರಿಂದ ಮಳೆ ಮತ್ತಷ್ಟು ಹೆಚ್ಚಳದ ಸೂಚನೆ

Share

02.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಮಳೆ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲ ದಿನಗಳಲ್ಲಿ ಮೋಡದ ವಾತಾವರಣ ಹೆಚ್ಚಾಗಲಿದ್ದು, ಜೂನ್ 4 ರಿಂದ ಮುಂಗಾರು ಚಟುವಟಿಕೆ ಆರಂಭವಾಗುವ ಲಕ್ಷಣಗಳು ಕಾಣಿಸುತ್ತಿವೆ.

ಕರಾವಳಿಯಲ್ಲಿ ಜೂನ್ 4ರಿಂದ ಮುಂಗಾರು ಚಲನೆ? :  ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ದಿನದ ವೇಳೆ ಬಿಸಿಲು ಹಾಗೂ ಮಧ್ಯೆ ಮಧ್ಯೆ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ. ತಡರಾತ್ರಿ ಕರಾವಳಿ ತೀರ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ. ಇದೇ ವೇಳೆ ಜೂನ್ 2ರಿಂದ ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗುವ ನಿರೀಕ್ಷೆಯಿದ್ದು, ಜೂನ್ 4ರಿಂದ ಮುಂಗಾರು ಮಾದರಿಯ ಮೋಡಗಳ ಚಲನೆ ಆರಂಭವಾಗುವ ಸೂಚನೆಗಳಿವೆ. ಜೂನ್ 8ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಲಕ್ಷಣಗಳಿವೆ.

ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹಲವೆಡೆ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಈಗಿನ ಹವಾಮಾನ ಮಾದರಿಗಳ ಪ್ರಕಾರ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಮಳೆ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಮಳೆ : ಉತ್ತರ ಒಳನಾಡಿನ ಬೆಳಗಾವಿ ಉತ್ತರ ಭಾಗ, ಕೊಪ್ಪಳ, ರಾಯಚೂರು ಹಾಗೂ ಹಾವೇರಿ ಜಿಲ್ಲೆಗಳ ಕೆಲವೆಡೆ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮುಂದಿನ ದಿನಗಳಲ್ಲಿಯೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳು ಕಂಡುಬರುತ್ತಿವೆ.

ದಕ್ಷಿಣ ಒಳನಾಡಿನಲ್ಲೂ ಸಂಜೆ ಮಳೆ : ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಕೆಲ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯ ವಾತಾವರಣ ಇನ್ನೂ ಕೆಲವು ದಿನ ಮುಂದುವರಿಯುವ ನಿರೀಕ್ಷೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka is likely to witness continued evening and night showers across several regions till June 2 morning. Coastal Karnataka may see increased cloud activity from June 2, with monsoon-like movement expected from June 4 and heavier rainfall likely after June 8. Malnad and interior districts are also expected to receive scattered rain and thunderstorms.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?

ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…

7 hours ago

ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!

ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…

8 hours ago

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…

12 hours ago

ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!

ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…

13 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

21 hours ago

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು

ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…

23 hours ago