Advertisement
ವೆದರ್ ಮಿರರ್

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

Share

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿಯೂ ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರಾವಳಿ: ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ ಈಗಿನ ಹವಾಮಾನ ಮಾದರಿಗಳ ಪ್ರಕಾರ ಮೇ 16ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿವೆ.

ಮಲೆನಾಡು: ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೇ 16ರಿಂದ ಕೊಡಗು ಜಿಲ್ಲೆಯನ್ನು ಹೊರತುಪಡಿಸಿ ಉಳಿದ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿವೆ.

ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಹಾಗೂ ವಿಜಯಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಬಹುದು. ಮುಂದಿನ 2 ರಿಂದ 3 ದಿನಗಳವರೆಗೆ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯ ನಿರೀಕ್ಷೆ ಇದೆ.

ದಕ್ಷಣ ಒಳನಾಡು: ಮೈಸೂರು ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನಲ್ಲಿ ಮುಂದಿನ 3 ರಿಂದ 4 ದಿನಗಳವರೆಗೆ ಮಳೆ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇದೆ.

ಇದೀಗ ಬಂಗಾಳಕೊಲ್ಲಿಯಲ್ಲಿ ಕಂಡುಬಂದಿರುವ ತಿರುವಿಕೆ ಶಿಥಿಲಗೊಳ್ಳುತ್ತಿರುವ ಹಿನ್ನೆಲೆಯಲ್ಲಿ 2026ರ ಮುಂಗಾರು ಮೇ 16 ಅಥವಾ 17ರಂದು ಅಂಡಮಾನ್ ಪ್ರದೇಶ ತಲುಪುವ ನಿರೀಕ್ಷೆ ಇದೆ. ಕರ್ನಾಟಕಕ್ಕೆ ಮೇ 20ರಿಂದ 25ರ ಅವಧಿಯಲ್ಲಿ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ.

Thunderstorms and scattered rain are likely across Coastal, Malnad, and parts of Interior Karnataka till May 14 morning. Rainfall activity may reduce slightly in Coastal and Malnad regions after May 16. Southwest monsoon is expected to reach Andaman around May 16-17 and may enter Karnataka between May 20 and 25.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

16 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

21 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

22 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago