Advertisement
ವೆದರ್ ಮಿರರ್

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

Share

ಕರ್ನಾಟಕದಲ್ಲಿ ಪೂರ್ವ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ 15.05.2026ರ ಬೆಳಿಗ್ಗೆ 8 ಗಂಟೆವರೆಗೆ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಭಾಗ : ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಈಗಿನ ವಾತಾವರಣದ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಇನ್ನೂ ಕೆಲವು ದಿನ ಮುಂದುವರಿಯುವ ಲಕ್ಷಣಗಳು ಕಂಡು ಬರುತ್ತಿವೆ.

ಮಲೆನಾಡು ಭಾಗ : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು ಜಿಲ್ಲೆಯಲ್ಲಿ ಮಳೆ ಚಟುವಟಿಕೆ ಮುಂದುವರಿಯುವ ನಿರೀಕ್ಷೆಯಿದ್ದರೂ, ಉಳಿದ ಮಲೆನಾಡು ಜಿಲ್ಲೆಗಳಲ್ಲಿ ಮೇ 16ರ ಬಳಿಕ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಸಾಧ್ಯತೆಗಳಿವೆ. ಆದರೆ ಹವಾಮಾನದಲ್ಲಿ ಬದಲಾವಣೆ ಸಂಭವಿಸಬಹುದಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿದೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಗಾಳಿಯ ಒತ್ತಡ ಹೆಚ್ಚಾದರೆ ಸಾಮಾನ್ಯ ಮಳೆಯಾಗುವ ಸಾಧ್ಯತೆಗಳಿವೆ. ಮೇ 15 ಅಥವಾ 16ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಮುಂಗಾರು ಸ್ಥಿತಿ :  ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ತಿರುಗುವಿಕೆ ಶಿಥಿಲಗೊಂಡಿದ್ದು, ಮುಂಗಾರು ಮಾರುತಗಳು ಅಂಡಮಾನ್ ದ್ವೀಪ ಪ್ರದೇಶವನ್ನು ಪ್ರವೇಶಿಸಿವೆ. ಮುಂದಿನ ದಿನಗಳಲ್ಲಿ ಯಾವುದೇ ವಾಯುಭಾರ ಕುಸಿತ ಉಂಟಾಗದಿದ್ದರೆ, ಮೇ 20ರಿಂದ 25ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶಿಸುವ ನಿರೀಕ್ಷೆ ಇದೆ. ರಾಜ್ಯಕ್ಕೆ ಈ ತಿಂಗಳ ಕೊನೆಯಲ್ಲಿ ಮುಂಗಾರು ಆಗಮಿಸುವ ಸಾಧ್ಯತೆಗಳಿದ್ದು, ಆರಂಭಿಕ ಹಂತದಲ್ಲಿ ದುರ್ಬಲ ಮುಂಗಾರು ಕಂಡುಬರುವ ಲಕ್ಷಣಗಳಿವೆ.

ಭಾರತೀಯ ಹವಾಮಾನ ಇಲಾಖೆ (IMD) ಅಂದಾಜಿನ ಪ್ರಕಾರ, ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಕರ್ನಾಟಕದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ವ್ಯಕ್ತವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Pre-monsoon rains are likely to continue across Karnataka till May 15 morning, with thunder showers expected in coastal, Malnad, and interior districts. Monsoon winds have entered the Andaman region and are expected to reach Kerala between May 20 and 25, while Karnataka may receive monsoon by the end of May. IMD has indicated that rainfall during June–September could remain below normal in the state.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

15 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

21 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

21 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago