ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

May 29, 2026
2:43 PM

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ಮಿಶ್ರ ವಾತಾವರಣ ಮುಂದುವರಿಯುವ ಲಕ್ಷಣಗಳು ಕಂಡು ಬರುತ್ತಿವೆ.

30.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಸದ್ಯ ಕಡಿಮೆಯಾಗಿದ್ದು, ಜೂ.4ರಿಂದ ಮುಂಗಾರು ಪ್ರವೇಶದ ಲಕ್ಷಣಗಳು ಕಾಣಿಸುತ್ತಿವೆ. ಆದರೆ ಉತ್ತಮ ಹಾಗೂ ನಿರಂತರ ಮಳೆಗಾಗಿ ಜೂ.7ರವರೆಗೆ ಕಾಯಬೇಕಾಗುವ ಸಾಧ್ಯತೆ ಇದೆ..

ಕರಾವಳಿಯಲ್ಲಿ ಸದ್ಯ ಮಳೆ ವಿರಾಮ :  ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದ್ದರೂ, ಜೋರು ಮಳೆಯ ಲಕ್ಷಣಗಳು ಈಗಷ್ಟೇ ಕಾಣಿಸುತ್ತಿಲ್ಲ. ಕಳೆದ ಕೆಲವು ದಿನಗಳಿಗಿಂತ ಮಳೆ ಪ್ರಮಾಣ ಕಡಿಮೆಯಾಗಿರುವುದು ಕೃಷಿಕರಲ್ಲೂ ಚಿಂತೆಗೆ ಕಾರಣವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಲೆನಾಡಿನಲ್ಲಿ ಚದುರಿದ ಮಳೆ : ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣವಿದ್ದು, ಕೊಡಗಿನ ಕೆಲವೆಡೆ ಸಂಜೆ ವೇಳೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಮಲೆನಾಡು ಭಾಗದಲ್ಲಿ ಜೂ. 1ರವರೆಗೆ ಇದೇ ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಉತ್ತರ ಒಳನಾಡಿನಲ್ಲಿ ಬಿಸಿಲಿನ ವಾತಾವರಣ : ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದ್ದು, ಹೆಚ್ಚಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ಕಾಣುತ್ತಿಲ್ಲ. ಆದರೆ ಬಳ್ಳಾರಿಯ ಒಂದೆರಡು ಕಡೆ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇದೇ ರೀತಿಯ ವಾತಾವರಣ ಮುಂದಿನ 10 ದಿನಗಳವರೆಗೆ ಮುಂದುವರಿಯುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ : ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಬಿಸಿಲು-ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಜೂನ್ 1ರವರೆಗೆ ಈ ಭಾಗಗಳಲ್ಲಿ ಮಳೆಯ ಚಟುವಟಿಕೆ ಮುಂದುವರಿಯುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮುಂಗಾರು ಆರಂಭ ದುರ್ಬಲ? :  ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿದ್ದರೂ, ಆರಂಭಿಕ ಹಂತದಲ್ಲಿ ಮುಂಗಾರು ದುರ್ಬಲವಾಗಿರುವ ಲಕ್ಷಣಗಳು ಗೋಚರಿಸುತ್ತಿವೆ. ಸೋಮಾಲಿಯ ಜೆಟ್ ವೇವ್ಸ್ ಪರಿಣಾಮದಿಂದ ಮಹಾರಾಷ್ಟ್ರ ಹಾಗೂ ಗುಜರಾತ್ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿದ್ದು, ಅದರ ಪರಿಣಾಮ ಕರ್ನಾಟಕದಲ್ಲಿ ಆರಂಭಿಕ ಮಳೆ ಚಟುವಟಿಕೆ ಮೇಲೆ ಬೀಳುವ ಸಾಧ್ಯತೆ ಇದೆ. ಸದ್ಯದ ಅಂದಾಜಿನಂತೆ ಜೂನ್ 7ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.

Karnataka is likely to witness mixed weather conditions over the next few days, with coastal districts expected to receive only light showers until June 4. Strong monsoon activity may begin after June 7, especially along the coast. Thunderstorms are likely in parts of Malnad and South Interior Karnataka, while North Interior districts may largely remain dry.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror