Advertisement
ವೆದರ್ ಮಿರರ್

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

Share

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಬಿಸಿಲಿನ ಜೊತೆಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಕರಾವಳಿ ಭಾಗ

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಸಂಜೆ ಅಥವಾ ರಾತ್ರಿ ತುಂತುರು ಹಾಗೂ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನ ಹವಾಮಾನ ಪರಿಸ್ಥಿತಿಯಂತೆ ಜೂ.1ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದ್ದು, ಜೂ.7ರ ಸುಮಾರಿಗೆ ಮುಂಗಾರು ಮಳೆ ಆರಂಭವಾಗುವ ಲಕ್ಷಣಗಳು ಕಂಡುಬರುತ್ತಿವೆ. ಆದರೆ ಮುಂಗಾರು ಆರಂಭ ದುರ್ಬಲವಾಗಿರುವ ಸಾಧ್ಯತೆಗಳಿವೆ.

ಮಲೆನಾಡು ಭಾಗ

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಜೂ. 1ರಿಂದ ಮಳೆಯ ಚಟುವಟಿಕೆ ಕಡಿಮೆಯಾಗುವ ನಿರೀಕ್ಷೆ ಇದ್ದು, ಜೂ.7ರಿಂದ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ.

ಉತ್ತರ ಒಳನಾಡು

ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಮುಂದಿನ ಸುಮಾರು 10 ದಿನಗಳವರೆಗೆ ಈ ಭಾಗದಲ್ಲಿ ಹೆಚ್ಚಿನ ಮಳೆಯ ಸಾಧ್ಯತೆ ಕಡಿಮೆಯಾಗಿದೆ ಎನ್ನಲಾಗಿದೆ.

ದಕ್ಷಿಣ ಒಳನಾಡು

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಮೇ 31ರವರೆಗೆ ಗುಡುಗು ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಒಟ್ಟಾರೆ, ಜೂ. 7ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ನಿರೀಕ್ಷೆ ಇದ್ದರೂ, ಆರಂಭಿಕ ಹಂತದಲ್ಲಿ ದುರ್ಬಲ ಮಳೆಯ ಸಾಧ್ಯತೆ ಇರುವುದಾಗಿ ಹವಾಮಾನ ಅಂದಾಜು.

Karnataka is expected to witness mixed weather conditions with sunshine, cloudy skies, and scattered thunder showers in several districts until May 31. Coastal and Malnad regions may receive light to moderate rain, while North Interior Karnataka is likely to remain mostly dry for the next 10 days. Southwest monsoon is expected to enter Karnataka around June 7, but the initial phase is likely to be weak.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?

ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…

6 hours ago

ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!

ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…

6 hours ago

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…

11 hours ago

ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!

ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…

11 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

20 hours ago

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು

ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…

22 hours ago