ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

October 8, 2026
2:48 PM
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು ಮಳೆ ಆರಂಭವಾಗುವ ಸೂಚನೆಗಳಿವೆ. ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳ ಚಲನೆಗೆ ಪೂರಕ ವಾತಾವರಣ ನಿರ್ಮಾಣವಾಗುತ್ತಿದ್ದು, ಅಂಡಮಾನ್ ಉತ್ತರ ಕರಾವಳಿಯಲ್ಲಿ ಅ.11ರ ಸುಮಾರಿಗೆ ಹವಾಮಾನ ಬದಲಾವಣೆಯ ಲಕ್ಷಣಗಳಿವೆ.

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿದಿರುವ ಬೆನ್ನಲ್ಲೇ ಹಿಂಗಾರು ಮಳೆಯ ಆಗಮನಕ್ಕೆ ಪೂರಕವಾದ ವಾತಾವರಣ ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿದೆ. ಅಕ್ಟೋಬರ್ 9ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆಯಂತೆ ಕರಾವಳಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಇಂದು ಮಧ್ಯಾಹ್ನದ ನಂತರ ಮತ್ತು ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆದರೆ ಅಕ್ಟೋಬರ್ 11ರಿಂದ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಅಕ್ಟೋಬರ್ 14ರಿಂದ 16ರ ಅವಧಿಯಲ್ಲಿ ರಾಜ್ಯದಲ್ಲಿ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆ ಇದೆ.

Advertisement

ಅಂಡಮಾನ್ ಉತ್ತರ ಕರಾವಳಿಯಲ್ಲೂ ಅಕ್ಟೋಬರ್ 11ರ ಸುಮಾರಿಗೆ ಹವಾಮಾನ ವ್ಯವಸ್ಥೆಯ ಬೆಳವಣಿಗೆಗೆ ಪೂರಕವಾದ ಬದಲಾವಣೆಗಳು ಆರಂಭವಾಗುವ ಲಕ್ಷಣಗಳಿವೆ.

ಕರಾವಳಿ ಕರ್ನಾಟಕ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವೆಡೆ ಮಧ್ಯಾಹ್ನದ ನಂತರ ಮತ್ತು ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.  ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ನಡುವೆ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಈಗಿನ ಮುನ್ಸೂಚನೆಯಂತೆ ಅಕ್ಟೋಬರ್ 11ರಿಂದ ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದ್ದರೂ, ಅಕ್ಟೋಬರ್ 15–16ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಯ ಸಕಲೇಶಪುರ ಸುತ್ತಮುತ್ತ ಮಧ್ಯಾಹ್ನದ ನಂತರ ಅಥವಾ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು ಹಾಗೂ ಕಳಸ ಸುತ್ತಮುತ್ತಲಿನ ಭಾಗಗಳಲ್ಲೂ ಮಧ್ಯಾಹ್ನದ ನಂತರ ಮತ್ತು ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಅಥವಾ ಒಂದೆರಡು ಕಡೆ ತುಂತುರು ಮಳೆಯಾಗಬಹುದು. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ.

ಮಲೆನಾಡಿನಲ್ಲಿ ಅಕ್ಟೋಬರ್ 11ರಿಂದ ಮಳೆ ಕಡಿಮೆಯಾಗುವ ಸಾಧ್ಯತೆ ಇದ್ದರೂ, ಅಕ್ಟೋಬರ್ 14–15ರಿಂದ ಹಿಂಗಾರು ಮಳೆ ಆರಂಭವಾಗುವ ಸೂಚನೆಗಳಿವೆ.

ಉತ್ತರ ಒಳನಾಡು :  ಉತ್ತರ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮವಾಗಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸದ್ಯ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ಬದಲಾವಣೆಯಾದರೆ ಅಕ್ಟೋಬರ್ 15ರಿಂದ ಉತ್ತರ ಒಳನಾಡಿನಲ್ಲೂ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆ ಇದೆ. ಹೀಗಾಗಿ ಸದ್ಯ ಒಣಹವೆ ಮುಂದುವರಿದಿದ್ದರೂ ಮುಂದಿನ ವಾರದಿಂದ ಹವಾಮಾನದಲ್ಲಿ ಬದಲಾವಣೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡು : ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ. ಆದರೆ ವಾತಾವರಣದ ಒತ್ತಡದ ಪರಿಸ್ಥಿತಿ ಅನುಕೂಲಕರವಾದರೆ ಮೈಸೂರು, ಹಾಸನ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಕೆಲವೆಡೆ ಸಂಜೆ ಅಥವಾ ರಾತ್ರಿ ಅನಿರೀಕ್ಷಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಈಗಿನ ಮುನ್ಸೂಚನೆಯಂತೆ ಅಕ್ಟೋಬರ್ 11ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಕ್ಷೀಣಿಸುವ ಸಾಧ್ಯತೆ ಇದ್ದರೂ, ಅಕ್ಟೋಬರ್ 15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿವೆ.

ಹಿಂಗಾರು ಮಳೆಗೆ ಸಿದ್ಧವಾಗುತ್ತಿದೆಯೇ ಕರ್ನಾಟಕ? : ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳ ಚಲನೆಗೆ ಪೂರಕವಾದ ವಾತಾವರಣ ಈಗಾಗಲೇ ನಿರ್ಮಾಣವಾಗುತ್ತಿದೆ. ಇದರ ಪರಿಣಾಮವಾಗಿ ಅಕ್ಟೋಬರ್ 15ರ ವೇಳೆಗೆ ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶಿಸುವ ಸಾಧ್ಯತೆ ಇದೆ.

ಅಕ್ಟೋಬರ್ 11ರ ಸುಮಾರಿಗೆ ಅಂಡಮಾನ್ ಉತ್ತರ ಕರಾವಳಿಯಲ್ಲಿ ಹವಾಮಾನ ವ್ಯವಸ್ಥೆಯ ಬದಲಾವಣೆ ಆರಂಭವಾಗುವ ಲಕ್ಷಣಗಳಿದ್ದು, ಮುಂದಿನ ದಿನಗಳಲ್ಲಿ ಅದರ ಚಲನೆ ಮತ್ತು ತೀವ್ರತೆ ಕರ್ನಾಟಕದ ಹಿಂಗಾರು ಮಳೆಯ ಸ್ವರೂಪವನ್ನು ನಿರ್ಧರಿಸುವ ಸಾಧ್ಯತೆಯಿದೆ.

ರೈತರಿಗೆ ಮುಂಜಾಗ್ರತೆ : ಅಕ್ಟೋಬರ್ 11ರವರೆಗೆ ಕರಾವಳಿ ಮತ್ತು ಮಲೆನಾಡಿನ ಕೆಲವೆಡೆ ಮಳೆಯ ಸಾಧ್ಯತೆ ಇರುವುದರಿಂದ ರೈತರು ಎಚ್ಚರಿಕೆ ವಹಿಸಬೇಕು. ಅಕ್ಟೋಬರ್ 14–16 ರ ವೇಳೆಗೆ ಹಿಂಗಾರು ಮಳೆಯ ಸಾಧ್ಯತೆ ಇರುವುದರಿಂದ ಕೊಯ್ಲು, ಒಣಗಿಸುವಿಕೆ ಹಾಗೂ ಸಂಗ್ರಹ ಕಾರ್ಯಗಳನ್ನು ಸ್ಥಳೀಯ ಹವಾಮಾನ ಮುನ್ಸೂಚನೆ ಆಧರಿಸಿ ಯೋಜಿಸುವುದು ಸೂಕ್ತ.

Southwest monsoon has completely withdrawn from Karnataka, while conditions are becoming favourable for the arrival of the northeast monsoon. Scattered thunderstorms are expected over coastal Karnataka and parts of Malnad on October 9, while rainfall may weaken from October 11. However, current indications suggest that the northeast monsoon could begin over Karnataka around October 14–16, with a possible weather-system development near the northern Andaman coast around October 11.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ
ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror