Advertisement
ವೆದರ್ ಮಿರರ್

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

Share

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿದಿದ್ದು, ರಾಜ್ಯದ ಹವಾಮಾನದಲ್ಲಿ ಮತ್ತೊಂದು ಬದಲಾವಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಅಕ್ಟೋಬರ್ 8ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆಯಂತೆ ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದರೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನಲ್ಲೂ ಅ.11ರವರೆಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

Advertisement

ಅಂಡಮಾನ್ ಸಮುದ್ರದ ಬಳಿ ವಾಯುಭಾರ ಕುಸಿತದ ಲಕ್ಷಣಗಳು ಕಂಡುಬರುತ್ತಿದ್ದು, ಅಕ್ಟೋಬರ್ 11ರ ಸುಮಾರಿಗೆ ಹಿಂಗಾರು ಆರಂಭಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ.

ಕರಾವಳಿ ಕರ್ನಾಟಕ : ಕಾಸರಗೋಡು ಜಿಲ್ಲೆ ಹಾಗೂ ದಕ್ಷಿಣ ಕನ್ನಡದ ಮಂಗಳೂರು, ಸುರತ್ಕಲ್, ಪುತ್ತೂರು ಮತ್ತು ಉಡುಪಿ ಕರಾವಳಿ ತೀರದ ಭಾಗಗಳಲ್ಲಿ ತಡರಾತ್ರಿ ಅಥವಾ ಮುಂಜಾನೆ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಸಂಜೆ ವೇಳೆಗೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಆದರೆ ಈಗಿನ ಮುನ್ಸೂಚನೆಯಂತೆ ದಿನ ಕಳೆದಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು :  ಕೊಡಗು ಜಿಲ್ಲೆಯ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಬಾಳೆಹೊನ್ನೂರು, ಕೊಪ್ಪ ಸುತ್ತಮುತ್ತ ಸಂಜೆ ವೇಳೆಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಮಲೆನಾಡು ಭಾಗಗಳಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನ ಮುನ್ಸೂಚನೆಯಂತೆ ಅಕ್ಟೋಬರ್ 11ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಉತ್ತರ ಒಳನಾಡು : ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಒಣಹವೆ ಮುಂದುವರಿಯಲಿದೆ. ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮವಾಗಿ ವಾತಾವರಣದಲ್ಲಿ ತೇವಾಂಶದ ಪ್ರಮಾಣ ಕಡಿಮೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿವೆ. ಮುಂದಿನ ದಿನಗಳಲ್ಲೂ ಈ ಭಾಗದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು : ಹಾಸನ ಹಾಗೂ ಮೈಸೂರು ಜಿಲ್ಲೆಗಳ ಕೆಲವೆಡೆ ಸಂಜೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನ ನಡುವೆ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಈಗಿನ ಮುನ್ಸೂಚನೆಯಂತೆ ಅಕ್ಟೋಬರ್ 11ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಹಿಂಗಾರು ಆರಂಭಕ್ಕೆ ಸಿದ್ಧವಾಗುತ್ತಿದೆಯೇ ಕರ್ನಾಟಕ? :  ನೈಋತ್ಯ ಮುಂಗಾರು ರಾಜ್ಯದಿಂದ ಸಂಪೂರ್ಣವಾಗಿ ಹಿಂದೆ ಸರಿದಿರುವ ಹಿನ್ನೆಲೆಯಲ್ಲಿ ಇದೀಗ ಹಿಂಗಾರು ಮಳೆಯತ್ತ ಗಮನ ಹರಿಯುತ್ತಿದೆ. ಅಂಡಮಾನ್ ಸಮುದ್ರದ ಬಳಿ ವಾಯುಭಾರ ಕುಸಿತದ ಲಕ್ಷಣಗಳು ಕಾಣಿಸಿಕೊಂಡಿದ್ದು, ಅಕ್ಟೋಬರ್ 11ರ ಸುಮಾರಿಗೆ ಹಿಂಗಾರು ಆರಂಭಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ.

ಮುಂದಿನ ದಿನಗಳಲ್ಲಿ ಈ ವಾಯುಭಾರ ಕುಸಿತದ ಬೆಳವಣಿಗೆ ಮತ್ತು ಅದರ ಚಲನೆ ಕರ್ನಾಟಕದ ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ರೈತರು ಹವಾಮಾನ ಮುನ್ಸೂಚನೆಗಳನ್ನು ಗಮನಿಸುವುದು ಸೂಕ್ತ.

ರೈತರಿಗೆ ಸಲಹೆ :  ಕರಾವಳಿ ಹಾಗೂ ಮಲೆನಾಡಿನಲ್ಲಿ ಕೆಲವೆಡೆ ಸಂಜೆ ಮತ್ತು ಮುಂಜಾನೆ ಮಳೆಯ ಸಾಧ್ಯತೆ ಇರುವುದರಿಂದ ಸ್ಥಳೀಯ ಹವಾಮಾನ ಗಮನಿಸಿ ಕ್ರಮ ಕೈಗೊಳ್ಳುವುದು ಸೂಕ್ತ. ಹಿಂಗಾರು ಮಳೆಯ ಮುನ್ನೋಟ ಸ್ಪಷ್ಟವಾಗುವವರೆಗೆ ಕೊಯ್ಲು ಮತ್ತು ಒಣಗಿಸುವ ಕಾರ್ಯದಲ್ಲಿ ಮುನ್ನೆಚ್ಚರಿಕೆ ವಹಿಸುವುದು ಉತ್ತಮ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

The southwest monsoon has completely withdrawn from Karnataka, while weather conditions may become favourable for the onset of the northeast monsoon around October 11. Isolated thunderstorms are expected over parts of coastal Karnataka and Malnad, while South Interior Karnataka may continue to receive scattered rain until October 11. North Interior Karnataka is likely to remain dry under the influence of dry winds from northern India. A low-pressure area is showing signs of development near the Andaman region, which could influence the upcoming weather pattern.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

6 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

6 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

6 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

6 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

23 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

1 day ago