Advertisement
MIRROR FOCUS

ರೇಬಿಸ್ ನಿರ್ಮೂಲನೆಗೆ ಕರ್ನಾಟಕದ ಹೊಸ ಪ್ರಯತ್ನ | ವಿಶ್ವವಿದ್ಯಾಲಯದಿಂದ ಬೀದಿ ನಾಯಿಗಳಿಗೆ ಓರಲ್ ರೇಬಿಸ್ ಲಸಿಕೆ ಸಂಶೋಧನೆ

Share

ರೇಬಿಸ್ ರೋಗ ನಿರ್ಮೂಲನೆ ಹಾಗೂ ನಿಯಂತ್ರಣದತ್ತ ಕರ್ನಾಟಕವು ಹೊಸ ಸಂಶೋಧನಾ ಹೆಜ್ಜೆ ಇಟ್ಟಿದ್ದು, ಬೀದಿ ನಾಯಿಗಳಿಗೆ ನೀಡಬಹುದಾದ “ಓರಲ್ ರೇಬಿಸ್ ಲಸಿಕೆ” (Oral Vaccine) ಅಭಿವೃದ್ಧಿಪಡಿಸಲು ಅಧ್ಯಯನ ಆರಂಭಿಸಲಾಗಿದೆ.

ಬೀದರ್‌ನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಬೆಂಗಳೂರಿನ ಹೆಬ್ಬಾಳದಲ್ಲಿರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಜೊತೆಗೂಡಿ ಈ ಮಹತ್ವದ ಸಂಶೋಧನೆ ನಡೆಸುತ್ತಿದೆ.  ಈ ಲಸಿಕೆಯನ್ನು ಬೀದಿ ನಾಯಿಗಳಿಗೆ ಮಾಂಸ ಅಥವಾ ಮೊಟ್ಟೆ ಮೂಲಕ ಆಹಾರ ರೂಪದಲ್ಲಿ ನೀಡುವ ಯೋಜನೆ ರೂಪಿಸಲಾಗಿದ್ದು, ಇದರಿಂದ ನಾಯಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ರೇಬಿಸ್ ನಿಯಂತ್ರಣಕ್ಕೆ ಮಹತ್ತರ ನೆರವಾಗಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಸಿ.ವೀರಣ್ಣ ತಿಳಿಸಿದ್ದಾರೆ.

ಈ ಸಂಶೋಧನಾ ಯೋಜನೆಗೆ ಹೈದ್ರಾಬಾದ್‌ನ ರಾಷ್ಟ್ರೀಯ ಪ್ರಾಣಿ ಜೈವಿಕ ತಂತ್ರಜ್ಞಾನ ಸಂಸ್ಥೆ, ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ಮಾಹಿತಿ ಸಂಸ್ಥೆ, ರಾಷ್ಟ್ರೀಯ ಪ್ರಾಣಿ ಸಂಪನ್ಮೂಲ ಸೌಲಭ್ಯ – ICMR, ರಾಷ್ಟ್ರೀಯ ಮಾಂಸ ಸಂಶೋಧನಾ ಸಂಸ್ಥೆ ಸಹಕಾರ ನೀಡುತ್ತಿದೆ. ಈ ಓರಲ್ ಲಸಿಕೆ ಅಭಿವೃದ್ಧಿಗಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಾಷ್ಟ್ರೀಯ “ಒನ್ ಹೆಲ್ತ್ ಮಿಷನ್” ಅಡಿಯಲ್ಲಿ ₹2.89 ಕೋಟಿ ರೂಪಾಯಿ ಅನುದಾನ ನೀಡಿದೆ. ಬೀದಿ ನಾಯಿಗಳಲ್ಲಿನ ರೇಬಿಸ್ ನಿಯಂತ್ರಣದ ಮೂಲಕ ಮಾನವರಿಗೂ ಸೋಂಕು ಹರಡುವ ಸಾಧ್ಯತೆಯನ್ನು ಕಡಿಮೆ ಮಾಡಬಹುದು. ಹೀಗಾಗಿ ಈ ಓರಲ್ ವ್ಯಾಕ್ಸಿನ್ ಸಂಶೋಧನೆ ರೇಬಿಸ್ ನಿರ್ಮೂಲನೆಗೆ ದೊಡ್ಡ ಕೊಡುಗೆಯಾಗಬಹುದು ಎಂದು  ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

1 hour ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

6 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

1 day ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

1 day ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago