ಪಡಿತರ ಅಕ್ಕಿ ಕಳ್ಳಸಾಗಣೆ ವಿರುದ್ಧ ಬಿಗಿ ಕ್ರಮ – 17.78 ಲಕ್ಷ ಕೆಜಿ ಪಡಿತರ ಸಾಮಗ್ರಿ ಜಪ್ತಿ

October 30, 2026
7:13 AM
ರಾಜ್ಯದಲ್ಲಿ ಅಕ್ರಮ ಪಡಿತರ ಅಕ್ಕಿ ಮತ್ತು ಆಹಾರ ಧಾನ್ಯಗಳ ಕಳ್ಳಸಾಗಣೆ ವಿರುದ್ಧ ನಡೆಸಿದ ಮೂರು ತಿಂಗಳ ಕಾರ್ಯಾಚರಣೆಯಲ್ಲಿ 17.78 ಲಕ್ಷ ಕೆಜಿ ಆಹಾರ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ 238 ಎಫ್‌ಐಆರ್ ದಾಖಲಿಸಿ 215 ಮಂದಿಯನ್ನು ಬಂಧಿಸಲಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಐದು ಲಕ್ಷ ಕೆಜಿಗೂ ಅಧಿಕ ಪಡಿತರ ಸಾಮಗ್ರಿ ವಶಪಡಿಸಿಕೊಳ್ಳಲಾಗಿದೆ.

ರಾಜ್ಯದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಹಾಗೂ ಇತರ ಆಹಾರ ಧಾನ್ಯಗಳನ್ನು ಸಾಗಣೆ ಮತ್ತು ಕಳ್ಳಸಾಗಣೆ ಮಾಡುವವರ ವಿರುದ್ಧ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಬಿಗಿ ಕ್ರಮ ಕೈಗೊಂಡಿದೆ. ಕಳೆದ ಮೂರು ತಿಂಗಳಲ್ಲಿ ರಾಜ್ಯದ ವಿವಿಧೆಡೆ ನಡೆಸಿದ ಕಾರ್ಯಾಚರಣೆಗಳಲ್ಲಿ ಒಟ್ಟು 17.78 ಲಕ್ಷ ಕೆಜಿ ಪಡಿತರ ಅಕ್ಕಿ ಹಾಗೂ ಇತರ ಆಹಾರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 238 ಎಫ್‌ಐಆರ್‌ಗಳನ್ನು ದಾಖಲಿಸಿ, 215 ಮಂದಿಯನ್ನು ಬಂಧಿಸಲಾಗಿದೆ.

Advertisement

ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಅವರ ನಿರ್ದೇಶನದಂತೆ ಇಲಾಖೆಯ ಅಧಿಕಾರಿಗಳು ಆಗಸ್ಟ್ 1ರಿಂದ ಅಕ್ರಮ ಪಡಿತರ ಸಾಗಣೆ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪಡಿತರ ಸಾಮಗ್ರಿಗಳನ್ನು ಸಾಗಿಸುವ ವಾಹನಗಳ ಪರಿಶೀಲನೆ ಹಾಗೂ ಖಾಸಗಿ ಗೋದಾಮುಗಳ ಮೇಲೆ ದಾಳಿ ನಡೆಸುವ ಮೂಲಕ ಅಕ್ರಮ ದಂಧೆಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಅಕ್ಕಿ, ಗೋಧಿ, ರಾಗಿ ಹಾಗೂ ವಿವಿಧ ಬೇಳೆಕಾಳುಗಳು ಸೇರಿದಂತೆ ಒಟ್ಟು 17.78 ಲಕ್ಷ ಕೆಜಿ ಆಹಾರ ಧಾನ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ಅಕ್ರಮ ಸಾಗಣೆಯಲ್ಲಿ ತೊಡಗಿದ್ದವರ ವಿರುದ್ಧ ಪ್ರಕರಣ ದಾಖಲಿಸಿ ಬಂಧನ ಮಾಡಲಾಗಿದೆ.

ಬೆಳಗಾವಿಯಲ್ಲಿ ಅತಿ ಹೆಚ್ಚು ಪಡಿತರ ಸಾಮಗ್ರಿ ಜಪ್ತಿ :  ಜಿಲ್ಲಾವಾರು ಕಾರ್ಯಾಚರಣೆಯಲ್ಲಿ ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ ಐದು ಲಕ್ಷ ಕೆಜಿಗೂ ಅಧಿಕ ಪಡಿತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೋಲಾರ ಜಿಲ್ಲೆಯಲ್ಲಿ ಸುಮಾರು ಮೂರೂವರೆ ಲಕ್ಷ ಕೆಜಿ ಆಹಾರ ಧಾನ್ಯಗಳನ್ನು ಜಪ್ತಿ ಮಾಡಲಾಗಿದೆ. ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಲಾ ಒಂದು ಲಕ್ಷ ಕೆಜಿಗೂ ಅಧಿಕ ಅಕ್ಕಿ ಹಾಗೂ ಇತರ ಆಹಾರ ಧಾನ್ಯಗಳನ್ನು ವಶಕ್ಕೆ ಪಡೆಯಲಾಗಿದೆ.

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಮತ್ತು ಅರ್ಹ ಕುಟುಂಬಗಳಿಗೆ ತಲುಪಬೇಕಾದ ಪಡಿತರ ಸಾಮಗ್ರಿಗಳು ಅಕ್ರಮವಾಗಿ ಬೇರೆಡೆಗೆ ಸಾಗಣೆಯಾಗುವುದನ್ನು ತಡೆಯಲು ಇಲಾಖೆ ಕಾರ್ಯಾಚರಣೆಯನ್ನು ಮುಂದುವರಿಸಿದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Karnataka’s Food, Civil Supplies and Consumer Affairs Department has intensified action against illegal diversion and smuggling of public distribution system (PDS) commodities. Over the past three months, authorities seized 17.78 lakh kg of rice and other food grains, including wheat, ragi and pulses. A total of 238 FIRs have been registered and 215 people arrested. Belagavi recorded the highest seizure, with more than five lakh kg, followed by Kolar with around 3.5 lakh kg. Bagalkot and Vijayapura each reported seizures exceeding one lakh kg.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಸ್ಸಾಂನಲ್ಲಿ 24 ಟನ್ ಶಂಕಿತ ವಿದೇಶಿ ಅಡಿಕೆ ವಶ – ರೈಲು ಸರಕು ಸಾಗಣೆ ಮೇಲೆ ನಿಗಾ
October 30, 2026
7:04 AM
by: ದ ರೂರಲ್ ಮಿರರ್.ಕಾಂ
ಬಂದರಿನಲ್ಲಿ 25 ಟನ್ ಹಸಿ ಅಡಿಕೆ ವಶ-ತೆರಿಗೆ ವಂಚನೆ ಆರೋಪದಲ್ಲಿ ಇಬ್ಬರು ವಶಕ್ಕೆ
October 30, 2026
6:55 AM
by: ದ ರೂರಲ್ ಮಿರರ್.ಕಾಂ
ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ: 2027ರ ಪರೀಕ್ಷೆಗಳ ದಿನಾಂಕ ನಿಗದಿ
October 30, 2026
6:40 AM
by: ದ ರೂರಲ್ ಮಿರರ್.ಕಾಂ
ರೈತರ ಖಾತೆಗೆ ₹2,500 ಬರ ಪರಿಹಾರ ಜಮೆ ಮಾಡಲು ರಾಜ್ಯ ಸರ್ಕಾರ ಆದೇಶ
October 30, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror