ರಾಜ್ಯದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಹಾಗೂ ಇತರ ಆಹಾರ ಧಾನ್ಯಗಳನ್ನು ಸಾಗಣೆ ಮತ್ತು ಕಳ್ಳಸಾಗಣೆ ಮಾಡುವವರ ವಿರುದ್ಧ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಬಿಗಿ ಕ್ರಮ ಕೈಗೊಂಡಿದೆ. ಕಳೆದ ಮೂರು ತಿಂಗಳಲ್ಲಿ ರಾಜ್ಯದ ವಿವಿಧೆಡೆ ನಡೆಸಿದ ಕಾರ್ಯಾಚರಣೆಗಳಲ್ಲಿ ಒಟ್ಟು 17.78 ಲಕ್ಷ ಕೆಜಿ ಪಡಿತರ ಅಕ್ಕಿ ಹಾಗೂ ಇತರ ಆಹಾರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 238 ಎಫ್‌ಐಆರ್‌ಗಳನ್ನು ದಾಖಲಿಸಿ, 215 ಮಂದಿಯನ್ನು ಬಂಧಿಸಲಾಗಿದೆ.
ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಅವರ ನಿರ್ದೇಶನದಂತೆ ಇಲಾಖೆಯ ಅಧಿಕಾರಿಗಳು ಆಗಸ್ಟ್ 1ರಿಂದ ಅಕ್ರಮ ಪಡಿತರ ಸಾಗಣೆ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪಡಿತರ ಸಾಮಗ್ರಿಗಳನ್ನು ಸಾಗಿಸುವ ವಾಹನಗಳ ಪರಿಶೀಲನೆ ಹಾಗೂ ಖಾಸಗಿ ಗೋದಾಮುಗಳ ಮೇಲೆ ದಾಳಿ ನಡೆಸುವ ಮೂಲಕ ಅಕ್ರಮ ದಂಧೆಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಅಕ್ಕಿ, ಗೋಧಿ, ರಾಗಿ ಹಾಗೂ ವಿವಿಧ ಬೇಳೆಕಾಳುಗಳು ಸೇರಿದಂತೆ ಒಟ್ಟು 17.78 ಲಕ್ಷ ಕೆಜಿ ಆಹಾರ ಧಾನ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ಅಕ್ರಮ ಸಾಗಣೆಯಲ್ಲಿ ತೊಡಗಿದ್ದವರ ವಿರುದ್ಧ ಪ್ರಕರಣ ದಾಖಲಿಸಿ ಬಂಧನ ಮಾಡಲಾಗಿದೆ.
ಬೆಳಗಾವಿಯಲ್ಲಿ ಅತಿ ಹೆಚ್ಚು ಪಡಿತರ ಸಾಮಗ್ರಿ ಜಪ್ತಿ : ಜಿಲ್ಲಾವಾರು ಕಾರ್ಯಾಚರಣೆಯಲ್ಲಿ ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ ಐದು ಲಕ್ಷ ಕೆಜಿಗೂ ಅಧಿಕ ಪಡಿತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೋಲಾರ ಜಿಲ್ಲೆಯಲ್ಲಿ ಸುಮಾರು ಮೂರೂವರೆ ಲಕ್ಷ ಕೆಜಿ ಆಹಾರ ಧಾನ್ಯಗಳನ್ನು ಜಪ್ತಿ ಮಾಡಲಾಗಿದೆ. ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಲಾ ಒಂದು ಲಕ್ಷ ಕೆಜಿಗೂ ಅಧಿಕ ಅಕ್ಕಿ ಹಾಗೂ ಇತರ ಆಹಾರ ಧಾನ್ಯಗಳನ್ನು ವಶಕ್ಕೆ ಪಡೆಯಲಾಗಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಮತ್ತು ಅರ್ಹ ಕುಟುಂಬಗಳಿಗೆ ತಲುಪಬೇಕಾದ ಪಡಿತರ ಸಾಮಗ್ರಿಗಳು ಅಕ್ರಮವಾಗಿ ಬೇರೆಡೆಗೆ ಸಾಗಣೆಯಾಗುವುದನ್ನು ತಡೆಯಲು ಇಲಾಖೆ ಕಾರ್ಯಾಚರಣೆಯನ್ನು ಮುಂದುವರಿಸಿದೆ.
ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
Karnataka’s Food, Civil Supplies and Consumer Affairs Department has intensified action against illegal diversion and smuggling of public distribution system (PDS) commodities. Over the past three months, authorities seized 17.78 lakh kg of rice and other food grains, including wheat, ragi and pulses. A total of 238 FIRs have been registered and 215 people arrested. Belagavi recorded the highest seizure, with more than five lakh kg, followed by Kolar with around 3.5 lakh kg. Bagalkot and Vijayapura each reported seizures exceeding one lakh kg.
ಅಸ್ಸಾಂನ ನ್ಯೂ ಬೊಂಗೈಗಾಂವ್ ರೈಲು ನಿಲ್ದಾಣದಲ್ಲಿ ಮ್ಯಾನ್ಮಾರ್ ಮೂಲದ್ದೆಂದು ಶಂಕಿಸಲಾದ ಸುಮಾರು 24…
ತಮಿಳುನಾಡಿನ ವಿಒಸಿ ಬಂದರಿನಲ್ಲಿ ತೆರಿಗೆ ವಂಚನೆ ಆರೋಪದಡಿ 25 ಟನ್ ಹಸಿ ಅಡಿಕೆಯನ್ನು…
2027ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ…
ಬರಪೀಡಿತ ಪ್ರದೇಶಗಳ ಅರ್ಹ ರೈತರಿಗೆ ತಲಾ ₹2,500 ಪರಿಹಾರ ನೀಡಲು ರಾಜ್ಯ ಸರ್ಕಾರ…
ಭಾರತದ ಸ್ವದೇಶಿ ನ್ಯಾವಿಗೇಷನ್ ವ್ಯವಸ್ಥೆ ನ್ಯಾವಿಕ್‌ಗೆ ಬಲ ತುಂಬುವ ಉದ್ದೇಶದಿಂದ ಇಸ್ರೋ ಅಕ್ಟೋಬರ್…
ಆಂಧ್ರಪ್ರದೇಶದ ಯಾನಮ್ ಮತ್ತು ಪಕ್ಕದ ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯ ಪ್ರದೇಶದಲ್ಲಿ ನೆಲೆಗೊಂಡಿರುವ ಅರ್ನಬ್…