ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್‌ಗಳು ಹಾಗೂ ಹೆಡ್ ಕಾನ್ಸ್‌ಟೇಬಲ್‌ಗಳು ಇನ್ನು ಮುಂದೆ ನೂತನ ‘ಖಾಕಿ ವಿಜಿಲ್ ಗಾರ್ಡ್’ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಈ ಕುರಿತು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಎಂ.ಎ. ಸಲೀಂ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಪೊಲೀಸ್ ಸಿಬ್ಬಂದಿ ಬಳಸುತ್ತಿರುವ ಮೆಟಲ್ ವಿಜಿಲ್ ಚೈನ್‌ಗಳು ಹವಾಮಾನ ವೈಪರೀತ್ಯದ ಪರಿಣಾಮವಾಗಿ ತುಕ್ಕು ಹಿಡಿಯುತ್ತಿವೆ. ಇದರಿಂದ ಸಿಬ್ಬಂದಿಯ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ತಿಳಿಸಲಾಗಿದೆ.
ಇಲಾಖೆಯ ಕೆಳಹಂತದ ಸಿಬ್ಬಂದಿಯ ಆರೋಗ್ಯ ಮತ್ತು ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಈ ಬದಲಾವಣೆ ಮಾಡಲಾಗಿದೆ. ಇತ್ತೀಚೆಗೆ ನಡೆದ ಪೊಲೀಸ್ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪೊಲೀಸ್ ಸಿಬ್ಬಂದಿಗೆ ನೂತನ ಖಾಕಿ ವಿಜಿಲ್ ಗಾರ್ಡ್ ಒದಗಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಇದೀಗ ಅಧಿಕೃತ ಆದೇಶ ಹೊರಬಿದ್ದಿದೆ.
ಹೊಸ ವ್ಯವಸ್ಥೆಯಿಂದ ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸುವಾಗ ವಿಜಿಲ್ ಚೈನ್‌ನಿಂದ ಉಂಟಾಗಬಹುದಾದ ತೊಂದರೆಗಳನ್ನು ತಪ್ಪಿಸುವ ಉದ್ದೇಶ ಹೊಂದಲಾಗಿದೆ.
Karnataka Director General of Police M.A. Saleem has issued an order making the new ‘Khaki Vigil Guard’ mandatory for police constables and head constables across the state. The change is intended to address concerns that existing metal whistle chains rust due to weather conditions and may adversely affect personnel’s health. The decision follows a commitment made by Chief Minister D.K. Shivakumar during the Police Martyrs’ Day event.


