Advertisement
ಸುದ್ದಿಗಳು

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

Share

ರಾಜ್ಯದ ಹಲವೆಡೆ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ವಿಶೇಷವಾಗಿ ಕರಾವಳಿಯಲ್ಲಿ ಮೇ 20ರಿಂದ ಮುಂಗಾರು ರೀತಿಯ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದು, ಸಂಜೆ ಹಾಗೂ ರಾತ್ರಿ ವೇಳೆಗೆ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಮುಂದುವರಿಯುವ ಲಕ್ಷಣಗಳು ಕಂಡುಬರುತ್ತಿದ್ದು, ಮೇ 20ರಿಂದ ಮುಂಗಾರು ಮಾದರಿಯ ಮಳೆಯ ವಾತಾವರಣ ನಿರ್ಮಾಣವಾಗುವ ನಿರೀಕ್ಷೆ ಇದೆ.

ಮಲೆನಾಡಿನಲ್ಲಿ ಗುಡುಗು ಮಳೆ : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಮೇ 19ರವರೆಗೆ ಪೂರ್ವ ಮುಂಗಾರು ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಉತ್ತರ ಒಳನಾಡಿನಲ್ಲಿ ಸಾಮಾನ್ಯ ಮಳೆ : ಧಾರವಾಡ, ಹಾವೇರಿ, ಗದಗ ಹಾಗೂ ಬಳ್ಳಾರಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ. ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಬಹುದು. ಮೇ 18ರವರೆಗೆ ಈ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಮೇ 19ರಿಂದ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡಿನಲ್ಲಿ ಮೋಡ-ಮಳೆ : ದಾವಣಗೆರೆ, ವಿಜಯನಗರ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಮೇ 18ರವರೆಗೆ ದಕ್ಷಿಣ ಒಳನಾಡು ಭಾಗಗಳಲ್ಲಿ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಮುಂಗಾರು ಪ್ರಗತಿಗೆ ಅಡ್ಡಿ ಸಾಧ್ಯತೆ : ಮುಂಗಾರು ಈಗಾಗಲೇ ಅಂಡಮಾನ್ ಪ್ರದೇಶ ಪ್ರವೇಶಿಸಿದ್ದು, ಮೇ 20ರ ಸುಮಾರಿಗೆ ಕೇರಳಕ್ಕೆ ತಲುಪುವ ನಿರೀಕ್ಷೆ ಇದೆ. ಆದರೆ ಇದೇ ವೇಳೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಕಂಡುಬರುತ್ತಿದ್ದು, ಇದು ಮುಂಗಾರು ಮುಂದುವರಿಕೆಗೆ ಕೆಲ ಮಟ್ಟಿಗೆ ಅಡ್ಡಿಯಾಗುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Pre-monsoon rains have intensified across Karnataka, especially in coastal and Malnad regions. Thunderstorms and moderate rain are likely in several districts until May 19, while coastal Karnataka may witness monsoon-like rainfall from May 20 onward. The southwest monsoon has already reached the Andaman region and is expected to reach Kerala around May 20, though a possible low-pressure system over the Arabian Sea may affect its further progress.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

3 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

4 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

14 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago