Advertisement
ವೆದರ್ ಮಿರರ್

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

Share

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು ಭಾಗಗಳಲ್ಲಿ ಪೂರ್ವ ಮುಂಗಾರು ಚಟುವಟಿಕೆಗಳು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಭಾಗ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವೆಡೆ ಇವತ್ತು ಮುಂಜಾನೆ ಮಳೆಯಾಗಿದೆ. ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಸೇರಿ ಕರಾವಳಿಯ ವಿವಿಧ ಭಾಗಗಳಲ್ಲಿ ಸಾಮಾನ್ಯದಿಂದ ಮಧ್ಯಮ ಪ್ರಮಾಣದ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಪ್ರಸ್ತುತ ಹವಾಮಾನ ಸ್ಥಿತಿಯಂತೆ ಮುಂದಿನ 10 ದಿನಗಳವರೆಗೆ ಕರಾವಳಿ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಮುಂದುವರಿಯುವ ಲಕ್ಷಣಗಳು ಕಂಡು ಬರುತ್ತಿವೆ.

ಮಲೆನಾಡು ಭಾಗ: ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಲೆನಾಡು ಪ್ರದೇಶಗಳಲ್ಲಿ ಈಗಾಗಲೇ ತೇವಾಂಶ ಹೆಚ್ಚಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿಯೂ ಮಳೆ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇದೆ.

ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಹಾಗೂ ಬಳ್ಳಾರಿ ಜಿಲ್ಲೆಗಳ ಹಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಗಾಳಿಯ ಒತ್ತಡ ಹೆಚ್ಚಾದರೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಇವತ್ತು ಹಾಗೂ ನಾಳೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದಾದರೂ ನಂತರ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ವ್ಯಕ್ತವಾಗಿದೆ.

ದಕ್ಷಿಣ ಒಳನಾಡು: ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಕೆಲವೆಡೆ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮುಂದಿನ 2 ರಿಂದ 3 ದಿನಗಳವರೆಗೆ ಈ ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.

ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುವ ಸಾಧ್ಯತೆಯಿರುವ ವಾಯುಭಾರ ಕುಸಿತದ ವ್ಯವಸ್ಥೆ ಮುಂದೆ ಸಾಗುತ್ತಿದ್ದು, ಈಗಿನ ಲಕ್ಷಣಗಳ ಪ್ರಕಾರ ಮೇ 11ರಂದು ಉತ್ತರ ಸುಮಾತ್ರ ಕರಾವಳಿಯ ಬಳಿ ತಿರುಗುವಿಕೆಯ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ವಾಯುಭಾರ ಕುಸಿತ ಸ್ಪಷ್ಟವಾಗಿ ಉಂಟಾದ ನಂತರವೇ ಅದರ ಪರಿಣಾಮ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹವಾಮಾನದಲ್ಲಿ ಹೇಗೆ ಕಾಣಿಸಿಕೊಳ್ಳುತ್ತದೆ ಎಂಬುದು ಸ್ಪಷ್ಟವಾಗಲಿದೆ.

Pre-monsoon activity has intensified across Karnataka with thunderstorm and rain forecasts for coastal, Malnad, and interior districts. Coastal Karnataka is expected to receive continued pre-monsoon showers for the next 10 days, while several interior districts may witness evening and night thunderstorms over the next few days.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 hours ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

2 hours ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

2 hours ago

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…

2 hours ago

ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..

ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…

2 hours ago

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

11 hours ago