ರಾಜ್ಯದಲ್ಲಿ ಮುಂದಿನ ಜೂನ್ನಿಂದ 1,225 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, ಈ ಶಾಲೆಗಳಿಗೆ ತೆರಳುವ ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಕ್ಕಳ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಗುಣಮಟ್ಟದ ಶಿಕ್ಷಣ ನೀಡಲು ಯೋಜಿಸಲಾಗಿದೆ. ಪ್ರತಿ ತರಗತಿಗೆ ಒಬ್ಬ ಶಿಕ್ಷಕರನ್ನು ನೇಮಿಸುವುದರ ಜೊತೆಗೆ, ಕೌಶಲ್ಯ ಅಭಿವೃದ್ಧಿ, ನಾಟಕ, ದೈಹಿಕ ಶಿಕ್ಷಣ ಹಾಗೂ ಸಂಗೀತ ಶಿಕ್ಷಣಕ್ಕೆ ಪ್ರತ್ಯೇಕ ಶಿಕ್ಷಕರನ್ನು ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.
ಇದರೊಂದಿಗೆ, ಮುಖ್ಯಮಂತ್ರಿಗಳ ಸಿಎಸ್ಆರ್ (CSR) ಅನುದಾನದಡಿ 1,000 ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒಂದೇ ಸೂರಿನಡಿ ಒದಗಿಸುವುದು ಹಾಗೂ ಶಾಲೆಗೆ ತೆರಳಲು ಸಾರಿಗೆ ಸೌಲಭ್ಯ ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಉಪಸಮಿತಿ ಉಪ ವಿಶೇಷಾಧಿಕಾರಿ ಹಾಗೂ ಉಪ ಕಾರ್ಯದರ್ಶಿ ಬಿ.ಎನ್. ಸವಿತಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Karnataka plans to launch 1,225 Karnataka Public Schools from next June, according to Primary and Secondary Education Minister Madhu Bangarappa. Students attending these schools will be provided free bus services. The schools are expected to offer quality education from LKG to second-year pre-university level, with dedicated teachers for each class and separate teachers for skill development, drama, physical education and music. The state is also taking steps to establish 1,000 schools using the Chief Minister’s CSR funds.


