ರಾಜ್ಯದ ಹಲವು ಕಡೆ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಈ ಬಾರಿ ವಾಡಿಕೆಯ ಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕೆ ನೀಡಲಾಗಿದೆ. . ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹುಬ್ಬಳ್ಳಿ, ಧಾರವಾಡ, ಬೀದರ್, ವಿಜಯಪುರ, ಬಳ್ಳಾರಿ, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel