ಹವಾಮಾನ ವರದಿ | 24-01-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಎಚ್ಚರಿಕೆ…! ಜ. 27 ರವರೆಗೆ ಮೋಡ–ಗುಡುಗು ಸಾಧ್ಯತೆ

January 24, 2026
2:12 PM
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಜನವರಿ 25ರಿಂದ 27ರವರೆಗೆ ಮೋಡದ ವಾತಾವರಣದೊಂದಿಗೆ ತುಂತುರು ಮಳೆ ಹಾಗೂ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಬಂಗಾಳಕೊಲ್ಲಿಯ ಉಷ್ಣ ಮಾರುತ ಪರಿಚಲನೆಯಿಂದ ತಮಿಳುನಾಡು ಮೂಲಕ ತೇವಾಂಶಭರಿತ ಗಾಳಿ ಬೀಸುತ್ತಿರುವುದು ಮಳೆಯ ಪ್ರಮುಖ ಕಾರಣ. ಉತ್ತರ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಮೋಡ ಕವಿಯಲಿದೆ.

25.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.  ಈಗಿನಂತೆ ಜನವರಿ 25ರಂದು ಮೋಡದ ಪ್ರಮಾಣ ಹೆಚ್ಚಾಗಲಿದ್ದು, 26 ಹಾಗೂ 27ರಂದು ಮಲೆನಾಡು ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಅಲ್ಲಲ್ಲಿ ಮಳೆಯಾಗಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಜನವರಿ 26 ಹಾಗೂ 27ರಂದು ಮಲೆನಾಡು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.  ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಜನವರಿ 26ರಂದು ದಾವಣಗೆರೆ, ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಬೆಳಿಗ್ಗೆಯಿಂದಲೇ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಜನವರಿ 25 ಹಾಗೂ 26ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮಳೆಯ ಕಾರಣ ಏನು? : ಬಂಗಾಳಕೊಲ್ಲಿಯಲ್ಲಿನ ಉಷ್ಣ ಮಾರುತ ಪರಿಚಲನೆ (Anti Cyclonic Circulation) ಪರಿಣಾಮವಾಗಿ ತಮಿಳುನಾಡು ಮೂಲಕ ತೇವಾಂಶಯುಕ್ತ ಗಾಳಿ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ಈ ಮಳೆಯಾಗಲಿದೆ.

ಉತ್ತರ ಭಾರತದ ಉತ್ತರ ಭಾಗಗಳಲ್ಲಿ ಪ್ರಭಲ ವಾಯುಭಾರ ಕುಸಿತದಂತಹ ತಿರುವಿಕೆಯ ಕಾರಣದಿಂದ ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಮಳೆ ಅಥವಾ ಭಾರಿ ಹಿಮಪಾತವಾಗುತ್ತಿರುವ ಲಕ್ಷಣಗಳಿದ್ದು, ರಾಜಸ್ಥಾನ, ಪಂಜಾಬ್, ದೆಹಲಿ, ಉತ್ತರಾಖಂಡ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಜನವರಿ 28ರ ತನಕ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror