ಮುಂದಿನ 2 ದಿನ ರಾಜ್ಯದಲ್ಲಿ ಮಳೆ ಅಬ್ಬರ….! | ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ..? |

Advertisement

ಯುಗಾದಿ ಹಬ್ಬಕ್ಕೂ ಮುನ್ನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿಯಾಗಿ ಸುರಿದಿದ್ದ ಬೇಸಿಗೆ ಮಳೆ ಹಲವು ಅವಾಂತರಗಳನ್ನು ಸೃಷ್ಟಿ ಮಾಡಿತ್ತು. ಸದ್ಯ ಹಬ್ಬದ ಬಳಿಕ ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ.

Advertisement

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಅನ್ವಯ ರಾಜ್ಯದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ತುಮಕೂರು, ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಹಿಳೆಯಾಗುವ ಮುನ್ಸೂಚನೆ ನೀಡಲಾಗದೆ.

Advertisement

ಉಳಿದಂತೆ ವಾಯುವ್ಯ ಭಾರತ ಭಾಗಳಲ್ಲಿ ಮಾರ್ಚ್​ 23ರ ಸಂಜೆಯಿಂದಲೇ ವಾತಾವರಣದಲ್ಲಿ ಬದಲಾವಣೆ ಆಗಿದ್ದು, ಗುಡುಗು ಮಳೆ ಪ್ರಾರಂಭವಾಗುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಐದು ದಿನಗಳಲ್ಲಿ ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಹಾಗೂ ಕರ್ನಾಟಕದ ಒಳನಾಡಿನ ಮೇಲೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 24-26 ರಿಂದ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು/ಆಲಿಕಲ್ಲು ಮಳೆಯಾಗುವ ನಿರೀಕ್ಷೆ ಇದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

ಯುಗಾದಿಗೂ ಮುನ್ನ ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಗದಗ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸುರಿದ ಮಳೆ ರೈತರಿಗೆ ಭಾರೀ ನಷ್ಟವನ್ನು ಉಂಟು ಮಾಡಿತ್ತು. ಅದರಲ್ಲೂ ಮಳೆಯೊಂದಿಗೆ ಆಲಿಕಲ್ಲು ಸುರಿದ ಪರಿಣಾಮ ಬೆಳೆದು ನಿಂತಿದ್ದ ಬೆಳೆ ಕೈ ಸೇರುವ ಮುನ್ನ ನಾಶವಾಗಿ ರೈತರು ಕಣ್ಣೀರಿಡುವ ಸ್ಥಿತಿ ಎದುರಾಗಿತ್ತು.

Advertisement

ಮಾವು, ಬಾಳೆ, ಟೊಮೆಟೊ, ಮೆಣಸಿನಕಾಯಿ, ದ್ರಾಕ್ಷಿ ಸೇರಿದಂತೆ ಹಲವು ತರಕಾರಿ ಹಾಗೂ ವಾಣಿಜ್ಯ ಬೆಳೆಗಳು ನೆಲಕಚ್ಚಿದ್ದವು. ಇದರೊಂದಿಗೆ ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ರೀತಿಯಲ್ಲಿ ಪರಿಹಾರ ನೀಡುವಂತೆ ಆಗ್ರಹಿಸಿದ್ದರು.

ಹವಾಮಾನದಲ್ಲಿ ಉಂಟಾಗುತ್ತಿರುವ ತೀವ್ರ ಬದಲಾವಣೆಯಿಂದ ಈ ವರ್ಷದ ಆರಂಭದ ಪೂರ್ವ ಮುಂಗಾರು ಚಟುವಟಿಕೆಗಳು ಬೇಗ ಪ್ರಾರಂಭವಾಗುತ್ತದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಮುಂದಿನ 2 ದಿನ ರಾಜ್ಯದಲ್ಲಿ ಮಳೆ ಅಬ್ಬರ….! | ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ..? |"

Leave a comment

Your email address will not be published.


*