ಯುಗಾದಿ ಹಬ್ಬಕ್ಕೂ ಮುನ್ನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿಯಾಗಿ ಸುರಿದಿದ್ದ ಬೇಸಿಗೆ ಮಳೆ ಹಲವು ಅವಾಂತರಗಳನ್ನು ಸೃಷ್ಟಿ ಮಾಡಿತ್ತು. ಸದ್ಯ ಹಬ್ಬದ ಬಳಿಕ ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಅನ್ವಯ ರಾಜ್ಯದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ತುಮಕೂರು, ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಹಿಳೆಯಾಗುವ ಮುನ್ಸೂಚನೆ ನೀಡಲಾಗದೆ.
ಉಳಿದಂತೆ ವಾಯುವ್ಯ ಭಾರತ ಭಾಗಳಲ್ಲಿ ಮಾರ್ಚ್ 23ರ ಸಂಜೆಯಿಂದಲೇ ವಾತಾವರಣದಲ್ಲಿ ಬದಲಾವಣೆ ಆಗಿದ್ದು, ಗುಡುಗು ಮಳೆ ಪ್ರಾರಂಭವಾಗುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಐದು ದಿನಗಳಲ್ಲಿ ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಹಾಗೂ ಕರ್ನಾಟಕದ ಒಳನಾಡಿನ ಮೇಲೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 24-26 ರಿಂದ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು/ಆಲಿಕಲ್ಲು ಮಳೆಯಾಗುವ ನಿರೀಕ್ಷೆ ಇದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.
ಯುಗಾದಿಗೂ ಮುನ್ನ ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಗದಗ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸುರಿದ ಮಳೆ ರೈತರಿಗೆ ಭಾರೀ ನಷ್ಟವನ್ನು ಉಂಟು ಮಾಡಿತ್ತು. ಅದರಲ್ಲೂ ಮಳೆಯೊಂದಿಗೆ ಆಲಿಕಲ್ಲು ಸುರಿದ ಪರಿಣಾಮ ಬೆಳೆದು ನಿಂತಿದ್ದ ಬೆಳೆ ಕೈ ಸೇರುವ ಮುನ್ನ ನಾಶವಾಗಿ ರೈತರು ಕಣ್ಣೀರಿಡುವ ಸ್ಥಿತಿ ಎದುರಾಗಿತ್ತು.
ಮಾವು, ಬಾಳೆ, ಟೊಮೆಟೊ, ಮೆಣಸಿನಕಾಯಿ, ದ್ರಾಕ್ಷಿ ಸೇರಿದಂತೆ ಹಲವು ತರಕಾರಿ ಹಾಗೂ ವಾಣಿಜ್ಯ ಬೆಳೆಗಳು ನೆಲಕಚ್ಚಿದ್ದವು. ಇದರೊಂದಿಗೆ ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ರೀತಿಯಲ್ಲಿ ಪರಿಹಾರ ನೀಡುವಂತೆ ಆಗ್ರಹಿಸಿದ್ದರು.
ಹವಾಮಾನದಲ್ಲಿ ಉಂಟಾಗುತ್ತಿರುವ ತೀವ್ರ ಬದಲಾವಣೆಯಿಂದ ಈ ವರ್ಷದ ಆರಂಭದ ಪೂರ್ವ ಮುಂಗಾರು ಚಟುವಟಿಕೆಗಳು ಬೇಗ ಪ್ರಾರಂಭವಾಗುತ್ತದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್‌ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…