Advertisement
ಸುದ್ದಿಗಳು

ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಗೆ ಆರೆಂಜ್ – ಎಲ್ಲೋ ಅಲರ್ಟ್‌ | ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

Share

ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಿಗೆ ಆಗಸ್ಟ್‌ 3 ರಿಂದ ಮುಂದಿನ ಕೆಲ ದಿನಗಳವರೆಗೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್‌ ಹಾಗೂ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌ ಘೋಷಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್‌ 3 ರಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ (64.5 ಮಿ.ಮೀ.–115.4 ಮಿ.ಮೀ.)ರಿಂದ ಹಾಗೂ (115.5 ಮಿ.ಮೀ.–204.4 ಮಿ.ಮೀ.) ಮಳೆಯಾಗುವ ಸಾಧ್ಯತೆ ಇದೆ ಎಂದು IMD ತಿಳಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಜಾರಿಯಲ್ಲಿದೆ.

ಇದರ ಜೊತೆಗೆ ಆಗಸ್ಟ್‌ 3 ರಂದು ಬೆಳಗಾವಿ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು,  ಆಗಸ್ಟ್‌ 4 ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಹಾಗೂ  ಆಗಸ್ಟ್‌ 5 ಮತ್ತು 6: ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ 64.5 ಮಿ.ಮೀ.ದಿಂದ 115.4 ಮಿ.ಮೀ.ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿರಂತರ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವಿಕೆ, ಗುಡ್ಡ ಪ್ರದೇಶಗಳಲ್ಲಿ ಭೂಕುಸಿತದ ಆತಂಕ, ನದಿ-ಹೊಳೆಗಳ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಹಾಗೂ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ IMD ಮನವಿ ಮಾಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

The India Meteorological Department (IMD) has issued an Orange Alert for Dakshina Kannada on August 3, forecasting heavy to very heavy rainfall. A Yellow Alert has also been issued for Belagavi, Uttara Kannada, Udupi, Kodagu, Shivamogga and Chikkamagaluru on different dates between August 3 and 6 due to the likelihood of heavy rainfall.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

6 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

6 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

7 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

7 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

7 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

1 day ago