ರಾಜ್ಯದಲ್ಲಿ ಮತ್ತೆ ಮಳೆಯ ಚಟುವಟಿಕೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ. ವಾತಾವರಣದಲ್ಲಿ ಉಂಟಾದ ಗಾಳಿಯ ದಿಕ್ಕು ಬದಲಾವಣೆಯಿಂದಾಗಿ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಕರಾವಳಿ ಭಾಗ : ಕರಾವಳಿ ಭಾಗದಲ್ಲಿ ಗಾಳಿಯ ಚಲನವಲನದಲ್ಲಿ ಬದಲಾವಣೆ ಕಂಡುಬಂದಿದ್ದು, ಅರಬ್ಬಿ ಸಮುದ್ರದಿಂದ ಪೂರ್ವಕ್ಕೆ ಹಾಗೂ ಬಂಗಾಳ ಕೊಲ್ಲಿಯಿಂದ ಪಶ್ಚಿಮಕ್ಕೆ ಗಾಳಿ ಚಲನೆ ಆರಂಭವಾಗಿದೆ. ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಹೆಬ್ರಿ ಭಾಗಗಳಲ್ಲಿ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆ ಇದೆ. ಇಂದಿನಿಂದ ಕರಾವಳಿಯಲ್ಲಿ ಮಳೆಯ ಆರಂಭದ ಲಕ್ಷಣಗಳು ಸ್ಪಷ್ಟವಾಗಿವೆ.
ಮಲೆನಾಡು ಭಾಗ : ಕೊಡಗು ಜಿಲ್ಲೆಯಲ್ಲೂ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದಲ್ಲಿ ಭಾಗಶಃ ಮೋಡ ಇರಲಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೋಡದ ವಾತಾವರಣ ಮುಂದುವರಿಯಲಿದೆ.
ಉತ್ತರ ಒಳನಾಡು : ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇನ್ನೂ ಒಣಹವೆ ಮುಂದುವರಿಯಲಿದ್ದು, ಮಳೆಯ ಸಾಧ್ಯತೆ ಕಡಿಮೆ.
ದಕ್ಷಿಣ ಒಳನಾಡು : ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲೂ ಸಂಜೆ ವೇಳೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.
ಇತರೆ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಒಟ್ಟು ಸ್ಥಿತಿ ಏನು? : ರಾಜ್ಯದಲ್ಲಿ ಇಂದಿನಿಂದ ಮಳೆಯ ವಾತಾವರಣ ಮತ್ತೆ ಆರಂಭ. ಪ್ರತಿದಿನ ಮಳೆ ಇರದೇ ಇದ್ದರೂ ಮುಂದಿನ ದಿನಗಳಲ್ಲಿ ಮಳೆಯ ನಿರೀಕ್ಷೆ ಹೆಚ್ಚಾಗಿದೆ.

