Advertisement
ಸುದ್ದಿಗಳು

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

Share

ರಾಜ್ಯದಲ್ಲಿ ಮತ್ತೆ ಮಳೆಯ ಚಟುವಟಿಕೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ. ವಾತಾವರಣದಲ್ಲಿ ಉಂಟಾದ ಗಾಳಿಯ ದಿಕ್ಕು ಬದಲಾವಣೆಯಿಂದಾಗಿ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಕರಾವಳಿ ಭಾಗ : ಕರಾವಳಿ ಭಾಗದಲ್ಲಿ ಗಾಳಿಯ ಚಲನವಲನದಲ್ಲಿ ಬದಲಾವಣೆ ಕಂಡುಬಂದಿದ್ದು, ಅರಬ್ಬಿ ಸಮುದ್ರದಿಂದ ಪೂರ್ವಕ್ಕೆ ಹಾಗೂ ಬಂಗಾಳ ಕೊಲ್ಲಿಯಿಂದ ಪಶ್ಚಿಮಕ್ಕೆ ಗಾಳಿ ಚಲನೆ ಆರಂಭವಾಗಿದೆ.  ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಹೆಬ್ರಿ ಭಾಗಗಳಲ್ಲಿ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆ ಇದೆ.  ಇಂದಿನಿಂದ ಕರಾವಳಿಯಲ್ಲಿ ಮಳೆಯ ಆರಂಭದ ಲಕ್ಷಣಗಳು ಸ್ಪಷ್ಟವಾಗಿವೆ.

ಮಲೆನಾಡು ಭಾಗ : ಕೊಡಗು ಜಿಲ್ಲೆಯಲ್ಲೂ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದಲ್ಲಿ ಭಾಗಶಃ ಮೋಡ ಇರಲಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೋಡದ ವಾತಾವರಣ ಮುಂದುವರಿಯಲಿದೆ.

ಉತ್ತರ ಒಳನಾಡು : ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇನ್ನೂ ಒಣಹವೆ ಮುಂದುವರಿಯಲಿದ್ದು, ಮಳೆಯ ಸಾಧ್ಯತೆ ಕಡಿಮೆ.

ದಕ್ಷಿಣ ಒಳನಾಡು : ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲೂ ಸಂಜೆ ವೇಳೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.
ಇತರೆ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಒಟ್ಟು ಸ್ಥಿತಿ ಏನು? :  ರಾಜ್ಯದಲ್ಲಿ ಇಂದಿನಿಂದ ಮಳೆಯ ವಾತಾವರಣ ಮತ್ತೆ ಆರಂಭ. ಪ್ರತಿದಿನ ಮಳೆ ಇರದೇ ಇದ್ದರೂ ಮುಂದಿನ ದಿನಗಳಲ್ಲಿ ಮಳೆಯ ನಿರೀಕ್ಷೆ ಹೆಚ್ಚಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

7 hours ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

15 hours ago

ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!

ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…

16 hours ago

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!

2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…

1 day ago

ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ

ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…

1 day ago

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ

ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…

2 days ago