ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

April 25, 2026
3:00 PM
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ. ಏಪ್ರಿಲ್ 28ರಿಂದ ಒಳನಾಡು ಪ್ರದೇಶಗಳಲ್ಲೂ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.

ಕರ್ನಾಟಕ ರಾಜ್ಯದಲ್ಲಿ ಬೇಸಿಗೆ ತಾಪಮಾನ ಮುಂದುವರಿದಿದ್ದರೂ, ಕೆಲವು ಪ್ರದೇಶಗಳಲ್ಲಿ ಮಳೆಯ ಚಟುವಟಿಕೆ ನಿಧಾನವಾಗಿ ಆರಂಭವಾಗುವ ಲಕ್ಷಣಗಳು ಕಾಣಿಸುತ್ತಿವೆ.

ಕರಾವಳಿ ಭಾಗದಲ್ಲಿ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ದಿನಪೂರ್ತಿ ಬಿಸಿಲಿನ ಜೊತೆಗೆ ಸಂಜೆ ವೇಳೆಗೆ ಮೋಡದ ವಾತಾವರಣ ಇರಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸುತ್ತಮುತ್ತ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ, ಸೋಮೇಶ್ವರ ಭಾಗಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬೆಳಗಾವಿ ಮತ್ತು ಧಾರವಾಡ ಗಡಿಭಾಗಗಳಲ್ಲೂ ಸಂಜೆ ವೇಳೆಗೆ ಚದುರಿದ ಮಳೆಯ ಸಾಧ್ಯತೆ ಇದೆ. ಪ್ರಸ್ತುತ ಸೂಚನೆಗಳ ಪ್ರಕಾರ, ಏಪ್ರಿಲ್ 26ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.

Advertisement

ಮಲೆನಾಡು ಭಾಗದಲ್ಲಿ ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಮೋಡದ ವಾತಾವರಣ ಮುಂದುವರಿಯಲಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 26ರಿಂದ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ನಿರೀಕ್ಷೆ ಇದೆ.

ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲೂ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಮೋಡದ ವಾತಾವರಣ ಇರಬಹುದು. ಪ್ರಸ್ತುತ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಏಪ್ರಿಲ್ 28ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆಗಳು ಕಂಡುಬರುತ್ತಿವೆ.

Advertisement

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ರಾತ್ರಿ ವೇಳೆ ಮೋಡದ ವಾತಾವರಣ ಇರಲಿದೆ. ಈ ಭಾಗದಲ್ಲೂ ಏಪ್ರಿಲ್ 28ರಿಂದ ಮಳೆ ಪ್ರಾರಂಭವಾಗುವ ಸಾಧ್ಯತೆಗಳು ಇದ್ದು, ಮುಂದಿನ ದಿನಗಳಲ್ಲಿ ಮಳೆಯ ಚಟುವಟಿಕೆ ಚುರುಕುಗೊಳ್ಳುವ ನಿರೀಕ್ಷೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka is expected to witness a gradual return of rainfall activity from April 26 in coastal and Malnad regions, with thunder showers in parts of Dakshina Kannada, Udupi, and nearby areas. Rainfall is likely to increase further across interior regions, especially from April 28, while most areas will continue to experience heat with cloudy conditions.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror