Advertisement
ಸುದ್ದಿಗಳು

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

Share

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಈಗ ಮೋಡ ಹಾಗೂ ಹೆಚ್ಚಿದ ತಾಪಮಾನದಿಂದ ಕೂಡಿದ ವಾತಾವರಣ ಮುಂದುವರಿಯಲಿದೆ.  ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ವಿಶೇಷವಾಗಿ ಘಟ್ಟದ ಕೆಳಭಾಗಗಳಲ್ಲಿ ಸಂಜೆ ವೇಳೆಯಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ – ಆದರೆ ಪ್ರಮಾಣ ಹೆಚ್ಚು ಇರುವುದಿಲ್ಲ. ಉತ್ತರ ಕನ್ನಡದಲ್ಲೂ ಕೆಲವೆಡೆ ಸಂಜೆ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 26ರಿಂದ ಕಾಸರಗೋಡು ಸೇರಿ ಕರಾವಳಿಯಲ್ಲಿ ವ್ಯಾಪಕ ಮಳೆಯ ಆರಂಭದ ಸೂಚನೆ ಇದೆ.

ಮಲೆನಾಡು ಭಾಗ :  ಕೊಡಗು ಜಿಲ್ಲೆಯಲ್ಲಿ ಬಿಸಿಲಿನ ಜೊತೆಗೆ ಮೋಡದ ವಾತಾವರಣ ಇರುತ್ತದೆ.
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಿರುವ ಕಾರಣ ಸಂಜೆ ವೇಳೆ ಗುಡುಗು ಸಹಿತ ಚಿಕ್ಕಮಟ್ಟದ ಮಳೆಯ ಸಾಧ್ಯತೆ ಇದೆ (ಪ್ರಮಾಣ ಕಡಿಮೆ). ಏಪ್ರಿಲ್ 25ರಿಂದ ಮಲೆನಾಡಿನಲ್ಲಿ ಮಳೆ ಚುರುಕಾಗುವ ಲಕ್ಷಣ.

ಉತ್ತರ ಒಳನಾಡು:  ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಭಾಗಗಳಲ್ಲಿ ಸಂಜೆ/ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಗಾಳಿ ಪ್ರಭಾವ ಹೆಚ್ಚಾದರೆ ವಿಜಯಪುರ, ಕಲಬುರ್ಗಿ, ಬೀದರ್, ಬಳ್ಳಾರಿ, ಕೊಪ್ಪಳದಲ್ಲೂ ಮಳೆಯಾಗಬಹುದು. ಏಪ್ರಿಲ್ 27–28ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ.

ದಕ್ಷಿಣ ಒಳನಾಡು :  ಮೈಸೂರು, ಚಾಮರಾಜನಗರದಲ್ಲಿ ಮೋಡದ ಪ್ರಮಾಣ ಸ್ವಲ್ಪ ಹೆಚ್ಚಾಗಬಹುದು.
ದಾವಣಗೆರೆ, ಚಿತ್ರದುರ್ಗ ಭಾಗಗಳಲ್ಲಿ ಒಂದೆರಡು ಕಡೆ ಸಂಜೆ/ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 26ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರಂಭದ ಸೂಚನೆ.

ಉತ್ತರ ಆಂಧ್ರ ಮತ್ತು ತೆಲಂಗಾಣ ಭಾಗಗಳಲ್ಲಿ ತಾಪಮಾನ ಹೆಚ್ಚಿರುವುದು ಉತ್ತರ ಒಳನಾಡಿನಲ್ಲಿ ಮಳೆಗೆ ಕಾರಣವಾಗಿದೆ. ಇದೇ ರೀತಿಯಾಗಿ ದಕ್ಷಿಣ ಆಂಧ್ರ ಹಾಗೂ ತಮಿಳುನಾಡಿನ ಬಿಸಿ ಪರಿಣಾಮದಿಂದ  ಏಪ್ರಿಲ್ 26 ನಂತರ ದಕ್ಷಿಣ ಒಳನಾಡಿನಲ್ಲೂ ಮಳೆಯ ಚಟುವಟಿಕೆ ಹೆಚ್ಚಾಗಲಿದೆ.

Karnataka is likely to witness a shift in weather conditions with rain expected to begin from April 25–26 across Malnad, Coastal, and Interior regions. While current rainfall chances remain low, thunderstorm activity will gradually increase, bringing relief from rising temperatures.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

8 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago